ಪರವಾನಗಿ ಇಲ್ಲದ ಅಕ್ರಮ ಬಂದೂಕು ಸಂಗ್ರಹ: ಇಬ್ಬರು ಅರೆಸ್ಟ್
ಹನೂರು: ಪರವಾನಗಿ ಇಲ್ಲದೆ ಬಂದೂಕನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆರ್.ಎಸ್.ದೊಡ್ಡಿ ಗ್ರಾಮದ ಇಬ್ಬರನ್ನು ಬಂಧಿಸಿರುವ ಘಟನೆ ಜರುಗಿದೆ.
ಆರ್ ಎಸ್ ದೂಡ್ಡಿಯ ಸಿದ್ದಶೆಟ್ಟಿ ಹಾಗೂ ಬಸವರಾಜು ಎಂಬಾತರೇ ಬಂಧಿತ ಆರೋಪಿಗಳಾಗಿದ್ದಾರೆ. ಹನೂರಿನ ಆರ್ ಎಸ್ ದೂಡ್ಡಿ ಸಮೀಪದ ಜಮೀನೊಂದರಲ್ಲಿ ನಾಡ ಬಂದೂಕುನ್ನು ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹನೂರು ಪೋಲಿಸ್ ಇನ್ಸ್’ಪೆಕ್ಟರ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಒಂದು ನಾಡ ಬಂದೂಕು ಸಿಕ್ಕಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈ ಕಾರ್ಯಚರಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಪೆದೆಗಳಾದ ಚಂದ್ರು,ರಾಮಕೃಷ್ಣ, ರಾಘವೇಂದ್ರ, ಮಣಿಕಂಠ, ರಾಜು, ಶಿವಕುಮಾರ್ ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw