ಅಂಬೇಡ್ಕರ್, ದಲಿತರ ಬಗ್ಗೆ ಅವಹೇಳನಾಕಾರಿ ಸ್ಕಿಟ್ ಪ್ರಕರಣ: ಜೈನ್ ವಿವಿ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ರಿಲೀಫ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ದಲಿತರ ಕುರಿತ ಅವಮಾನಕಾರಿ ಸ್ಕಿಟ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಜೈನ್ ವಿವಿ ವಿದ್ಯಾರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ.
ವಿದ್ಯಾರ್ಥಿಗಳ ವಿರುದ್ಧದ ಪ್ರಕ್ರಿಯೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿದ್ಯಾರ್ಥಿಗಳೊಂದಿಗೆ ಇಬ್ಬರು ಸಿಬ್ಬಂದಿಗಳೂ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಸಿಬ್ಬಂದಿಗಳ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಜು.05 ರಂದು ತಡೆ ನೀಡಿತ್ತು ಈಗ ವಿದ್ಯಾರ್ಥಿಗಳ ವಿರುದ್ಧದ ತನಿಖೆಗೆ ತಡೆ ನೀಡಿದೆ ಎಂದು ವರದಿಯಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ನೀಡಿದ ದೂರಿನ ಮೇರೆಗೆ ವಿದ್ಯಾರ್ಥಿಗಳು ದಲಿತರು ಮತ್ತು ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಸ್ಕಿಟ್ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಕಿಟ್ ಪ್ರದರ್ಶನ ನಡೆಸಿದ್ದರು. ಫೆ.10 ರಂದು ಎಫ್ ಐಆರ್ ದಾಖಲಾಗಿತ್ತು.
ಅಂಬೇಡ್ಕರ್ ಹಾಗೂ ದಲಿತರನ್ನು ನಿಂದಿಸಿ ಮಾಡಲಾಗಿದ್ದ ಸ್ಕಿಟ್ ವಿರುದ್ಧ ರಾಜ್ಯ ವ್ಯಾಪಿ ಭಾರೀ ಹೋರಾಟಗಳು ನಡೆದಿದ್ದವು, ಪ್ರಕರಣ ಕೋರ್ಟ್ ಮೆಟ್ಟಿಲೇರಿದ ಬಳಿಕ ಪ್ರತಿಭಟನೆಗಳು ನಿಂತು ಹೋಗಿದ್ದವು. ಜೈನ್ ವಿವಿಯ ಮಾನ್ಯತೆ ರದ್ದು ಮಾಡಬೇಕು ಎಂದು ಸಾರ್ವಜನಿಕರು ವ್ಯಾಪಕವಾಗಿ ಹೋರಾಟ ನಡೆಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw