ಸೂಕ್ತ ನಾಯಕತ್ವವಿಲ್ಲದೇ ಸೊರಗುತ್ತಿದೆಯೇ ರಾಜ್ಯ ಬಿಜೆಪಿ?: ಇಂತಹ ಹೀನಾಯ ಸ್ಥಿತಿ ಯಾವ ರಾಜ್ಯದಲ್ಲೂ ಇಲ್ಲ!

ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆಯೇ ವಿಧಾನ ಸಭಾ ಅಧಿವೇಶನ ನಡೆದಿದೆ.
ಸದನದಲ್ಲಿ ವಿಪಕ್ಷ ನಾಯಕನ ಸ್ಥಾನ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಆದ್ರೆ.. ಬಿಜೆಪಿಯಲ್ಲಿ ಸರಿಯಾದ ನಾಯಕತ್ವದ ಕೊರತೆ ಹಾಗೂ ಗೊಂದಲದಿಂದಾಗಿ ವಿಪಕ್ಷ ನಾಯಕನ ಸ್ಥಾನ ತುಂಬಲು ಸಾಧ್ಯವಾಗಿಲ್ಲ ಅನ್ನೋ ಮಾತುಗಳು ಕೇಳಿ ಬಂದಿವೆ.
ಮೇ ತಿಂಗಳಲ್ಲಿ ಅಧಿವೇಶನದಲ್ಲಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದಾಗಲೂ ವಿರೋಧ ಪಕ್ಷದ ನಾಯಕರಿರಲಿಲ್ಲ. ಸಂವಿಧಾನದಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಹಳಷ್ಟು ಮಹತ್ವವಿದೆ. ಆದರೆ ಇಂತಹ ಹುದ್ದೆಯನ್ನೇ ಭರ್ತಿಗೊಳಿಸದ ಬಿಜೆಪಿಯಲ್ಲಿ ಏನೋ ಸಮಸ್ಯೆ ಇದೆ ಎನ್ನುವುದು ಎಲ್ಲರಿಗೂ ಅರಿವಾಗುವಂತೆ ಕಣ್ಣಿಗೆ ಕಾಣುತ್ತಿದೆ.
ರಾಜ್ಯ ಬಿಜೆಪಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನಾಯಕತ್ವವನ್ನು ಬಿಜೆಪಿ ಹೈಕಮಾಂಡ್ ಒಪ್ಪಿಕೊಂಡಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಕರ್ನಾಟಕ ಬಿಜೆಪಿ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದರೂ, ಸೂಕ್ತ ನಾಯಕತ್ವವಿಲ್ಲದೇ ಬಿಜೆಪಿ ಸೊರಗುತ್ತಿರುವುದು ಕಂಡು ಬಂದಿದೆ.
ಕರ್ನಾಟಕದಲ್ಲಿ ಬಿಜೆಪಿಗೆ ಹೀನಾಯ ಸೋಲಾದ ಬೆನ್ನಲ್ಲೇ ಕರ್ನಾಟಕ ಬಿಜೆಪಿಯನ್ನು ಹೈಕಮಾಂಡ್ ಸಂಪೂರ್ಣವಾಗಿ ನಿರ್ಲಕ್ಷಿಸಿರುವಂತೆ ಕಂಡು ಬಂದಿದೆ. ಇಂತಹ ಸ್ಥಿತಿ ಬೇರೆ ಯಾವುದೇ ರಾಜ್ಯಗಳಲ್ಲಿಯೂ ಬಿಜೆಪಿಗೆ ಬಂದಿಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw