ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಕಾಲು ಜಾರಿ ಬಿದ್ದು ನೀರು ಪಾಲು: ಕ್ಯಾಮರಾದಲ್ಲಿ ದೃಶ್ಯ ಸೆರೆ
ಯುವಕನೊಬ್ಬ ಜಲಪಾತದ ನೀರಿಗೆ ಕಾಲುಜಾರಿ ಬಿದ್ದು ನೀರುಪಾಲಾದ ಘಟನೆ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ.
ಈ ಯುವಕ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಂಡೆಕಲ್ಲೊಂದರ ಮೇಲೆ ಯುವಕ ನಿಂತಿದ್ದಾಗ ಆಕಸ್ಮಾತ್ತಾಗಿ ಕಾಲುಜಾರಿ ಬಿದ್ದಿದ್ದಾನೆ.
ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದು ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ದಾಖಲಾಗಿದೆ.
ವಿಡಿಯೋ ನೋಡಿ:
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw