ಅವರು 'INDIA' ಹೆಸರನ್ನು ಇಷ್ಟಪಡುತ್ತಾರೆ: ಮೋದಿಗೆ ಬಂಗಾಳ ದೀದಿ ತಿರುಗೇಟು - Mahanayaka

ಅವರು ‘INDIA’ ಹೆಸರನ್ನು ಇಷ್ಟಪಡುತ್ತಾರೆ: ಮೋದಿಗೆ ಬಂಗಾಳ ದೀದಿ ತಿರುಗೇಟು

25/07/2023

ಮೋದಿ ಅವರು ‘INDIA’ ಎಂಬ ಹೆಸರನ್ನು ಇಷ್ಟಪಡುತ್ತಾರೆ ಎಂದು ಭಾವಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಪಕ್ಷಗಳ ಮೈತ್ರಿಕೂಟದ ಕುರಿತ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.


Provided by

ರಾಜಭವನದಲ್ಲಿ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ಪ್ರತಿಪಕ್ಷಗಳ ಮೈತ್ರಿಕೂಟದ ಬಗ್ಗೆ ಬಿಜೆಪಿ ಹೆಚ್ಚು ಕೆಟ್ಟದಾಗಿ ಮಾತನಾಡಿದಷ್ಟು ಅವರು ಅದರ ಬಗ್ಗೆ ಒಲವು ಹೊಂದಿದ್ದಾರೆ ಎಂದು ಸಾಬೀತುಪಡಿಸುತ್ತದೆ ಎಂದಿದ್ದಾರೆ.

‘ನಮ್ಮ ಪ್ರಧಾನಿಗೆ ಧನ್ಯವಾದಗಳು. ಅವರು ‘ಇಂಡಿಯಾ’ ಹೆಸರನ್ನು ಇಷ್ಟಪಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಸಾಮಾನ್ಯ ಜನರಂತೆ ಅವರು ಸಹ ಅದನ್ನು ಒಪ್ಪಿಕೊಂಡಿದ್ದಾರೆ. ಅವರು ಆ ಹೆಸರಿನ ಬಗ್ಗೆ ಹೆಚ್ಚು ಕೆಟ್ಟದಾಗಿ ಮಾತನಾಡುತ್ತಾರೆ ಎಂದರೆ ಅದನ್ನು ಹೆಚ್ಚು ಇಷ್ಟಪಡುತ್ತಾರೆ ಎಂದೇ ಅರ್ಥ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.


Provided by

ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ದೇಶ ಕಂಡ ಅತ್ಯಂತ ದಿಕ್ಕು ತೋಚದ ಮೈತ್ರಿಕೂಟ ಎಂದು ಟೀಕಿಸಿದ್ದ ಪ್ರಧಾನಿ ಮೋದಿ, ಈಸ್ಟ್ ಇಂಡಿಯಾ ಕಂಪನಿ ಮತ್ತು ಇಂಡಿಯನ್ ಮುಜಾಹಿದ್ದೀನ್‌ ಹೆಸರುಗಳನ್ನು ಉಲ್ಲೇಖಿಸಿ, ಕೇವಲ ದೇಶದ ಹೆಸರು ಬಳಸುವುದರಿಂದ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ