ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಮೂವರು ಆರೋಪಿ ವಿದ್ಯಾರ್ಥಿನಿಯರಿಗೆ ಷರತ್ತುಬದ್ದ ಜಾಮೀನು ಮಂಜೂರು

ಉಡುಪಿ ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿ ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ
ಆರೋಪಿ ವಿದ್ಯಾರ್ಥಿನಿಯರು ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 509,204,175,34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಮೂವರು ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮೂವರು ಆರೋಪಿಗಳಿಗೆ ಜಾಮೀನು ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ಆರೋಪಿಗಳ ಪರ ಉಡುಪಿಯ ನ್ಯಾಯವಾದಿ ಅಸದುಲ್ಲಾ ಕಟಪಾಡಿ ವಾದಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw