ಸಿಎಂ ವಿರುದ್ಧ ವಿವಾದಾತ್ಮಕ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪೊಲೀಸ್ ವಶಕ್ಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ತುಮಕೂರಿನಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿವಾದಾತ್ಮಕವಾಗಿ ಪೋಸ್ಟ್ ಹಾಕಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
‘ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ.. ಸಿದ್ದರಾಮಯ್ಯನವರ ಸೊಸೆ Or ಹೆಂಡ್ತಿ ಅವ್ರ ವಿಡಿಯೋವನ್ನು ಇದೇ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?’ ಎಂದು ಶಕುಂತಲಾ ಪ್ರಶ್ನಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw