ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪ್ಯಾರಿಸ್ ಗೆ ಹೊರಟ ವಿಮಾನ ವಾಪಸ್..!
ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪ್ಯಾರಿಸ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮರಳಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ಪ್ಯಾರಿಸ್ ಗೆಂದು ಶುಕ್ರವಾರ ಮಧ್ಯಾಹ್ನ ಏರ್ ಇಂಡಿಯಾ ವಿಮಾನ AI143 ನಿರ್ಗಮಿಸಿದ ಬಳಿಕ ರನ್ ವೇ ಯಲ್ಲಿ ಟೈರ್ ಅವಶೇಷಗಳು ಕಂಡುಬಂದಿವೆ. ಈ ಬಗ್ಗೆ ವಿಮಾನ ಸಿಬ್ಬಂದಿಗೆ ದೆಹಲಿ ಎಟಿಸಿಯ ಮಾಹಿತಿ ನೀಡಿದ್ದು, ಅದನ್ನು ಅನುಸರಿಸಿ ಅಗತ್ಯ ತಪಾಸಣೆಗಾಗಿ ಮಧ್ಯಾಹ್ನ 2.30 ಕ್ಕೆ ಮರಳಿ ದೆಹಲಿ ವಿಮಾನ ನಿಲ್ದಾಣದಲ್ಲಿವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು.
ವಿಮಾನದ ತಪಾಸಣೆ ನಡೆಸಲಾಗುತ್ತಿದೆ. ಹೀಗಾಗಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw