‘ಲವ್ ಜಿಹಾದ್’ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹದ್ದಿನ ಕಣ್ಣು: ಹಿಮಂತ ಬಿಸ್ವಾ ಶರ್ಮಾ ಇಟ್ಟ ದೊಡ್ಡ ಹೆಜ್ಜೆ ಏನ್ ಗೊತ್ತಾ..?
ರಾಜ್ಯದಲ್ಲಿ ‘ಲವ್ ಜಿಹಾದ್’ ಪ್ರಕರಣಗಳ ತನಿಖೆಗಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್ (ಎಸ್ಒಪಿ) ಅಭಿವೃದ್ಧಿಪಡಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
‘ಲವ್ ಜಿಹಾದ್’ನ ಮೂಲ ಕಾರಣ ಬಲವಂತದ ಧಾರ್ಮಿಕ ಮತಾಂತರಗಳು ಎಂದು ಶರ್ಮಾ ಬೊಂಗೈಗಾಂವ್ ನಲ್ಲಿ ನಡೆದ ಸಮಾವೇಶದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. “ರಾಜ್ಯದಲ್ಲಿ ಶೀಘ್ರದಲ್ಲೇ ಒಂದು ಕಾಯ್ದೆಯನ್ನು ಜಾರಿಗೆ ತರಲಾಗುವುದು. ಅದರ ಮೂಲಕ ಎಲ್ಲಾ ಸಮುದಾಯಗಳಿಗೆ ಮದುವೆಯ ವಯಸ್ಸನ್ನು ಕಾನೂನುಬದ್ಧವಾಗಿ ನಿಗದಿಪಡಿಸಲಾಗುವುದು. ಆರೋಪಿಗಳಿಗೆ ಜಾಮೀನು ಸಿಗದಂತೆ ಹೆಚ್ಚಿನ ಶಾಸನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಶರ್ಮಾ ಹೇಳಿದ್ದಾರೆ.
ಕೆಲವು ವಿಂಟೇಜ್ ಆಗಿರೋ ಕಾಯ್ದೆಗಳು ನಮ್ಮ ಗಮನಕ್ಕೆ ಬಂದಿವೆ. ಬಾಲ್ಯ ವಿವಾಹದ ವಿರುದ್ಧ ಕ್ರಮ ಕೈಗೊಳ್ಳಲು ಅಡ್ಡಿಯಾಗುವುದರಿಂದ ನಾವು ಅವುಗಳನ್ನು ರದ್ದುಗೊಳಿಸುತ್ತೇವೆ ಎಂದು ಅವರು ಹೇಳಿದರು.
ಗೋಲಾಘಾಟ್ ನಲ್ಲಿ ಸೋಮವಾರ 25 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಹಿಂದೂ ಪತ್ನಿ ಮತ್ತು ಆಕೆಯ ಹೆತ್ತವರನ್ನು ಕೊಂದ ತ್ರಿವಳಿ ಕೊಲೆ ಪ್ರಕರಣವು ‘ಲವ್ ಜಿಹಾದ್’ ಪ್ರಕರಣವಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹೇಳಿದರು.
‘ಲವ್ ಜಿಹಾದ್’ಗೆ ಬಲಿಯಾದ ಹುಡುಗಿಯರು ಆತ್ಮಹತ್ಯೆ ಮಾಡಿಕೊಳ್ಳುವ ಅನೇಕ ದುರಂತ ಘಟನೆಗಳು ನಡೆದಿವೆ. ಹಿಂದೂ ಮತ್ತು ಮುಸ್ಲಿಂ ಪುರುಷರು ತಮ್ಮ ಸಮುದಾಯದ ಮಹಿಳೆಯರನ್ನು ಮದುವೆಯಾದರೆ ದೇಶದಲ್ಲಿ ಶಾಂತಿ ನೆಲೆಸುತ್ತದೆ ಎಂದು ಅವರು ಹೇಳಿದ್ದಾರೆ.
ಅಸ್ಸಾಂ ರಾಜ್ಯದಲ್ಲಿ ಬಾಲ್ಯ ವಿವಾಹಗಳನ್ನು ಎದುರಿಸಲು ಸೆಪ್ಟೆಂಬರ್ ನಲ್ಲಿ ಮತ್ತೊಂದು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಬಹುಪತ್ನಿತ್ವ ಮತ್ತು ಬಾಲ್ಯವಿವಾಹಗಳಿಗಾಗಿ ಬಂಧಿಸಲ್ಪಟ್ಟ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದನ್ನು ಖಚಿತಪಡಿಸಿಕೊಳ್ಳಲು ಶಾಸಕಾಂಗ ಬೆಂಬಲ ನೀಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಈ ಸಮಾವೇಶದಲ್ಲಿ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw