ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರಿನ ಯುವಕ ಸಾವು!

ಚಿಕ್ಕಮಗಳೂರು : ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕನೋರ್ವ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ಯುವಕ ಗಿರೀಶ್ (25) ಕೇದಾರನಾಥ ಯಾತ್ರೆಯಲ್ಲಿ ಸಾವನ್ನಪ್ಪಿದ ಯುವಕನಾಗಿದ್ದಾನೆ.ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಗಿರೀಶ್ ಗಿರೀಶ್ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಗಿರೀಶ್ ನ ಮೃತ ದೇಹವನ್ನಿರಿಸಲಾಗಿದೆ.
ಕಳೆದ ವಾರ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಗಿರೀಶ್, ಅಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿರೋದಾಗಿ ಕೇದಾರನಾಥ ಪೊಲೀಸರು ಗಿರೀಶ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು.
ಮೃತ ಗಿರೀಶ್ ಮೂಡಿಗೆರೆಯಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಾ ಜೀವನ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw