ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾಯೋಜನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು , ಇದಕ್ಕೆ ಎಷ್ಟು ಹಣ ಬೇಕು ಎಂಬ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಅನುದಾನ ಹೊಂದಾಣಿಕೆ ಮಾಡಲಾಗುವುದು. ಪಡುಬಿದ್ರೆ ಬೀಚ್ ನಲ್ಲಿ ಸಾಕಷ್ಟು ಕಾಮಗಾರಿ ನಡೆದಿದ್ದು, ಇನ್ನು ಅನೇಕ ಕಾಮಗಾರಿ ಬಾಕಿ ಹಾಗೂ ಹೊಸ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಪಡುಬಿದ್ರೆ ಬೀಚ್ ನಲ್ಲಿ ಕಡಲ್ಕೊರೆತ ವೀಕ್ಷೀಸಿ ಮಾತನಾಡಿದರು. ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಳು ವೈದ್ಯ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮತ್ತಿತರರು ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw