ಶಕ್ತಿ ಯೋಜನೆ ಫಲ: ಕೆಟ್ಟ ಬಸ್ ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ: ಬಸವರಾಜ ಬೊಮ್ಮಾಯಿ ಟೀಕೆ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ ಮಾತ್ರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಶಕ್ತಿ ಯೋಜನೆ ಜಾರಿಯಾದ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಗ್ಯಾರೆಂಟಿ ಯೋಜನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ ಎಂದು ತಿಳಿಸಿದ್ದಾರೆ.
ಬರುವ ದಿನಗಳಲ್ಲಿ ಸಾರಿಗೆ ನಿಗಮಗಳು ಬಸ್ ಗಳನ್ನು ಡಿಸೆಲ್ ಇಲ್ಲದೆ ನಿಲ್ಲಿಸುವಂತದ್ದು, ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತದ್ದು, ಕೆಟ್ಟ ಬಸ್ ಗಳು ರಸ್ತೆಯಲ್ಲಿ ನಿಲ್ಲುವ ದಿನಗಳು ದೂರವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw