ಪರಿಶಿಷ್ಟರ 11,000 ಕೋಟಿ ಹಣ ದುರ್ಬಳಕೆ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ದಲಿತ ವಿರೋಧಿ ಎಂಬುದನ್ನು ಸಾಬೀತು ಪಡಿಸಲು ಹೊರಟಿದೆ. ದಲಿತ ವರ್ಗದ ಶ್ರೇಯೋಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್ ಸಿ — ಎಸ್ ಪಿ / ಟಿ ಎಸ್ ಪಿ ಯೋಜನೆಯ 11,130 ಕೋಟಿ ರೂಪಾಯಿಗಳನ್ನು ಗ್ಯಾರೆಂಟಿಗಳಿಗಾಗಿ ವಿನಿಯೋಜಿಸುತ್ತಿರುವುದು ವರ್ಗಕ್ಕೆ ಮಾಡಿದ ಮಹಾ ಅನ್ಯಾಯ ” ಎಂದು ಆಮ್ ಆದ್ಮಿ ಪಕ್ಷದ ಎಸ್ ಸಿ /ಎಸ್ ಟಿ ವಿಭಾಗದ ರಾಜ್ಯಾಧ್ಯಕ್ಷ ಪುರುಷೋತ್ತಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದೇ ರೀತಿಯ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ಬಂದಿದ್ದ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಮತನೀಡಿದ ದಲಿತ ವರ್ಗ ಇಂದು ಮಹಾ ಮೋಸಕ್ಕೆ ಒಳಗಾಗುತ್ತಿರುವುದು ದುರಂತ. 14 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಈ ಬಾರಿ 4079 ಕೋಟಿ ರೂಪಾಯಿಗಳನ್ನು ಹೆಚ್ಚುವರಿ ಯಾಗಿ ಈ ಯೋಜನೆಯಲ್ಲಿ ಇಟ್ಟಿದ್ದೆವೆಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳುತ್ತಾ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.
ಇದೀಗ ದಲಿತ ವರ್ಗದಿಂದ ಛೀಮಾರಿ ಹಾಕಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಯಾವುದೇ ಕಾರಣಕ್ಕೂ ದಲಿತ ವರ್ಗಕ್ಕೆ ಈ ರೀತಿ ಅನ್ಯವಾಗುವುದನ್ನು ನಾವು ಸಹಿಸುವುದಿಲ್ಲ. ಹೋರಾಟದ ಹಾದಿಯನ್ನು ಇಳಿಯುತ್ತೇವೆ ” ಎಂದು ಪುರುಷೋತ್ತಮ ಸರ್ಕಾರವನ್ನು ಎಚ್ಚರಿಸಿದರು.
ಮುಂದುವರಿದು ಮಾತನಾಡಿದ ಪಕ್ಷದ ಉಪಾಧ್ಯಕ್ಷ ಸುರೇಶ್ ರಾಥೋಡ್ ” ಹೇಳುವುದು ಒಂದು ಮಾಡುವುದು ಇನ್ನೊಂದು ಕಾಂಗ್ರೆಸ್ ಸರ್ಕಾರದ ಪರಿಪಾಠ. ಈ ಬಗ್ಗೆ ರಾಜ್ಯ ವ್ಯಾಪಿ ಹೋರಾಟವನ್ನು ರೂಪಿಸುತ್ತೇವೆ. ಇದೇ ತಿಂಗಳ ಆಗಸ್ಟ್ 5 ಶನಿವಾರದಂದು ನಗರದ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ದಲಿತ ನೀತಿಯ ವಿರುದ್ಧ ಹೋರಾಟ ಮಾಡಲಿದ್ದೇವೆ. ನಮ್ಮ ಪ್ರತಿಭಟನೆಗೆ ಅನೇಕ ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ ” ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡ ಗಂಗಬೈಲಪ್ಪ ಇನ್ನಿತರರು ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw