ಅರಗ ಜ್ಞಾನೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಮುಖ್ಯಮಂತ್ರಿ ಚಂದ್ರು - Mahanayaka

ಅರಗ ಜ್ಞಾನೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಮುಖ್ಯಮಂತ್ರಿ ಚಂದ್ರು

c m chandru
03/08/2023

ಬೆಂಗಳೂರು: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ.

” ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ ನುಡಿಯಂತೆ ನಾವೆಲ್ಲರೂ ದೇಶದ ಅಸ್ಪೃಶ್ಯತೆಯನ್ನು ನಿವಾರಿಸುವ , ತೊಡೆದು ಹಾಕುವ , ಸರ್ವರಿಗೂ ಸಮಪಾಲು – ಸಮ ಬಾಳನ್ನು ನೀಡುವ ಕಾಲಘಟ್ಟದಲ್ಲಿ ಇರುವಾಗ, ಮನಸ್ಮೃತಿಯ ಹರಿಕಾರರಂತೆ ಅರಗ ಜ್ಞಾನೇಂದ್ರ ಹೇಳಿಕೆ ಇವರ ಸಂಸ್ಕೃತಿಯನ್ನು ತೋರಿಸುತ್ತದೆ. ನಮ್ಮ ಸಂವಿಧಾನಕ್ಕೆ , ರಾಷ್ಟ್ರದ ದಲಿತ ಸಮುದಾಯಗಳಿಗೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಯಾವುದೇ ಕಾರಣಕ್ಕೂ ಇವರ ಹೇಳಿಕೆ ಸಹಿಸಲು ಸಾಧ್ಯವಿಲ್ಲ ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

” ಕಾಂಗ್ರೆಸ್ ಸರ್ಕಾರವು ಇವರ ಮೇಲೆ ಮೊಕದ್ದಮೆಯನ್ನು ಹಾಕಿ, ಇವರ ವಿರುದ್ಧ ಎಫ್ ಐಆರ್ ಮಾಡಬೇಕಿದೆ. ಇವರ ಶಾಸಕತ್ವವನ್ನು ಅನೂರ್ಜಿತಗೊಳಿಸುವಂತಹ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಂಡಲ್ಲಿ ಮುಂದಿನ ದಿನಮಾನಗಳಲ್ಲಿ ಯಾರೂ ದಲಿತ ವರ್ಗಗಳನ್ನು ತುಚ್ಚವಾಗಿ ನೋಡುವುದು, ಮಾತನಾಡುವುದು ತಪ್ಪುತ್ತದೆ. ಸರ್ಕಾರ ಈ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಬೇಕೆಂದು ” ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ