ಉಪರಪೇಟೆ ಪೊಲೀಸರ ಕಾರ್ಯಾಚರಣೆ: ದ್ವಿಚಕ್ರ ವಾಹನ ಕಳ್ಳರ ಬಂಧನ

ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಉಪರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರಿನ ವಿವಿಧ ಕಡೆ ಹಾಗೂ ದಾವಣಗೆರೆ ಜಿಲ್ಲೆ, ರಾಮನಗರ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಂದಿಗೆ ಸೇರಿ ಕೃತ್ಯವೆಸಗುತ್ತಿದ್ದು, ಅವರ ಮಾಹಿತಿ ಮೇರೆಗೆ ಒಟ್ಟು 9 ವಿವಿಧ ಕಂಪನಿಗಳ ದ್ವಿಚಕ್ರವಾಹನಗಳನ್ನು ವಶ ಪಡಿಸಿಕೊಂಡಿರುತ್ತಾರೆ.
ಇದರ ಒಟ್ಟು ಮೌಲ್ಯ 11,40,000/-. ಸದರಿ ಆರೋಪಿಯಿಂದ ಉಪರಪೇಟೆ ಪೊಲೀಸ್ ಠಾಣೆಯ 2 ಪಕರಣಗಳು, ಚಂದ್ರಲೇಔಟ್, ಕಾಮಾಕ್ಷಿಪಾಳ್ಯ, ಬ್ಯಾಟರಾಯನಪುರ, ಜಾನಭಾರತಿ, ಹನುಮಂತನಗರ, ಹಾರೋಹಳ್ಳಿ, ದಾವಣಗೆರೆ ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆಯ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿರುತ್ತದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಲಕ್ಷ್ಮಣ್ ನಿಂಬರ್ಗಿ ಸೂಕ್ತ ಮಾರ್ಗದರ್ಶನದಲ್ಲಿ ಚಿಕ್ಕಪೇಟೆ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಕೆ.ಸಿ.ಗಿರಿ ರವರ ನಿರ್ದೇಶನದಲ್ಲಿ ಉಪ್ಪರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ವಸಂತ್. ಹೆಚ್.ಎಸ್ ಹಾಗೂ ಸಿಬ್ಬಂನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw