ನೂಹ್ ನಲ್ಲಿ‌ ನಿಲ್ಲದ ಹಿಂಸಾಚಾರ: ಮತ್ತೊಂದು ಮಸೀದಿಗೆ ಬೆಂಕಿ; ಸಂಘರ್ಷಕ್ಕೆ ನಡುಗಿದ ಊರು - Mahanayaka
11:21 AM Saturday 21 - September 2024

ನೂಹ್ ನಲ್ಲಿ‌ ನಿಲ್ಲದ ಹಿಂಸಾಚಾರ: ಮತ್ತೊಂದು ಮಸೀದಿಗೆ ಬೆಂಕಿ; ಸಂಘರ್ಷಕ್ಕೆ ನಡುಗಿದ ಊರು

03/08/2023

ಹರ್ಯಾಣದ ನೂಹ್ ಪಟ್ಟಣದಲ್ಲಿ ಹಿಂಸಾಚಾರ ಮುಂದವರೆದಿದೆ. ಈ ಮಧ್ಯೆ ಮತ್ತೊಂದು ಮಸೀದಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಎರಡು ಮಸೀದಿಗಳಲ್ಲಿ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗುತ್ತಿದೆ. ಪರಿಣಾಮ ಎರಡು ಮಸೀದಿಗಳಲ್ಲಿ ಅಪಾರ ಹಾನಿಗಳಾಗಿವೆ.

ಒಂದು ಮಸೀದಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಆದರೆ ಮತ್ತೊಂದು ಮಸೀದಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವಂತಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು ಎಂದು ಪೊಲೀಸ್ ಅಧೀಕ್ಷಕ (ನೂಹ್), ವರುಣ್ ಸಿಂಗ್ಲಾ ಅವರು ಹೇಳಿದ್ದಾರೆ.

ಆರೋಪಿಗಳ ಪತ್ತೆಗಾಗಿ ಸಮೀಪದ ಪ್ರದೇಶಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


Provided by

ಈ ನಡುವೆ ನೂಹ್ ನಲ್ಲಿ ಪರಿಸ್ಥಿತ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಕರ್ಫ್ಯೂ ಸಡಿಲಿಸಲಾಗಿದ್ದು ಜನರು ದೈನಂದಿನ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ನುಹ್ ಉಪ ಆಯುಕ್ತ ಪ್ರಶಾಂತ್ ಪನ್ವಾರ್ ಅವರು ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆಯನ್ನು ತಡೆಯಲು ಗುಂಪೊಂದು ಯತ್ನಿಸಿದ ನಂತರ ಸೋಮವಾರ ನೂಹ್‌ನಲ್ಲಿ ಕೋಮು ಹಿಂಸಾಚಾರದ ಭುಗಿಲೆದ್ದಿತ್ತು. ನುಹ್‌ನಲ್ಲಿ ಪ್ರಾರಂಭವಾದ ಕೋಮು ಹಿಂಸಾಚಾರವು ಗುರುಗ್ರಾಮವನ್ನು ತಲುಪಿತು. ಈ ಹಿನ್ನೆಲೆಯಲ್ಲಿ ನೂಹ್ ಮತ್ತು ಪಲ್ವಾಲ್ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.

ಹಿಂಸಾಚಾರದಲ್ಲಿ ಇದುವರೆಗೆ ಆರು ಮಂದಿ ಸಾವನ್ನಪ್ಪಿದ್ದಾರೆ. 159 ಮಂದಿಯನ್ನು ಬಂಧಿಸಲಾಗಿದೆ ಎಂದು ಹರ್ಯಾಣ ಸರ್ಕಾರ ಮಾಹಿತಿ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ