ಕಲುಶಿತ ನೀರು ಸೇವನೆ ಪ್ರಕರಣ: ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆ - Mahanayaka

ಕಲುಶಿತ ನೀರು ಸೇವನೆ ಪ್ರಕರಣ: ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆ

chithradurga
04/08/2023

ಚಿತ್ರದುರ್ಗ: ಜಿಲ್ಲೆಯ ಕವಾಡಿಗರಹಟ್ಟಿ ಶುಕ್ರವಾರ ನಡೆದ ಕಲುಶಿತ ನೀರು ಸೇವನೆ ಪ್ರಕರಣದಲ್ಲಿ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 36ರಿಂದ 149 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.


Provided by

ಆಸ್ಪತ್ರೆಗೆ ದಾಖಲಾದವರಲ್ಲಿ ಹಲವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯಾಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕವಾಡಿಗರಹಟ್ಟಿಯ ರುದ್ರಪ್ಪ (50) ಇಂದು ಬೆಳಗ್ಗೆ ಸಾವಿಗೀಡಾಗಿದ್ದಾರೆ.

ಜುಲೈ 31ರಂದು ಕಲುಷಿತ ನೀರು ಸೇವನೆ ಪ್ರಕರಣ ವರದಿಯಾಗಿತ್ತು. ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23) ಮತ್ತು ರಘು (27) ಎಂಬುವವರು ಸಾವಿಗೀಡಾಗಿದ್ದಾರೆ. ಕಲುಷಿತ ನೀರು ಸೇವಿಸಿ 36 ಮಂದಿ ಅಸ್ವಸ್ಥರಾಗಿದ್ದು, ಜುಲೈ 30ರಂದು ಗ್ರಾಮಕ್ಕೆ ಸಂಬಂಧಿಕರನ್ನು ಭೇಟಿ ಮಾಡಲು ಬಂದಿದ್ದ ಪ್ರವೀಣ್, ಮರುದಿನ ವಡ್ಡರಸಿದ್ದನಹಳ್ಳಿಯಲ್ಲಿ ಮೃತಪಟ್ಟಿದ್ದಾರೆ.


Provided by

ನೀರಿನ ಮಾದರಿಯಲ್ಲಿ ಯಾವುದೇ ವಿಷಕಾರಿ ರಾಸಾಯನಿಕ ಪತ್ತೆಯಾಗಿಲ್ಲ ಎಂದು ಎಫ್ಎಸ್ಎಲ್ ವರದಿ ದೃಢಪಡಿಸಿದೆ. ಸ್ಥಳೀಯರೊಬ್ಬರ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾದ ಬಳಿಕ ಕಿಡಿಗೇಡಿಗಳು ನೀರಿಗೆ ವಿಷ ಬೆರೆಸಿರಬಹುದು ಎಂದು ಆರೋಪಿಸಲಾಗಿದೆ. ಆದರೆ, ನೀರು ಕಲುಷಿತಗೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ವರದಿ ದೃಢಪಡಿಸಿದೆ.

ಘಟನೆ ಸಂಬಂಧ ತನಿಖೆಗೆ ಸಿದ್ದರಾಮಯ್ಯನವರು ಆದೇಶಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಎಇಇ ಆರ್. ಮಂಜುನಾಥ ಗಿರಡ್ಡಿ ಮತ್ತು ಜೆಇ ಎಸ್.ಆರ್. ಕಿರಣ್ ಕುಮಾರ್ ಅವರನ್ನು ಅಮಾನತುಗೊಳಿಸಲು ಅಧಿಕಾರಿಗಳು ಶಿಫಾರಸು ಮಾಡಿ ವರದಿ ಕಳುಹಿಸಿದ್ದಾರೆ. ಕವಾಡಿಗರಹಟ್ಟಿಯಲ್ಲಿ ವಾಲ್ವ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಸಿ.ಹೆಚ್. ಪ್ರಕಾಶ್ ಬಾಬು ಅವರನ್ನೂ ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ