ಪ್ರಚೋದನಕಾರಿ ಹೇಳಿಕೆ: ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 28ರಂದು ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿಯಿಂದ ಎಸ್ಪಿ ಕಚೇರಿ ವರೆಗೆ ನಡೆದ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಮಾತನಾಡಿದ ವೀಣಾ ಶೆಟ್ಟಿ, ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಗಳಿಗೆ ಸೇರಿಸಿ ಎಂದು ಹೇಳಿದ್ದರು.
ವೀಣಾ ಶೆಟ್ಟಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಇವರ ಹೇಳಿಕೆ ಕೋಮು ದ್ವೇಷ, ಧರ್ಮ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw