ಕಲುಷಿತ ನೀರು ಸೇವನೆ ಪ್ರಕರಣ: ಸಾವಿಗೀಡಾದವರ ಸಂಖ್ಯೆ 5ಕ್ಕೆ ಏರಿಕೆ - Mahanayaka
10:23 AM Sunday 22 - September 2024

ಕಲುಷಿತ ನೀರು ಸೇವನೆ ಪ್ರಕರಣ: ಸಾವಿಗೀಡಾದವರ ಸಂಖ್ಯೆ 5ಕ್ಕೆ ಏರಿಕೆ

chathradurga 1
04/08/2023

ಚಿತ್ರದುರ್ಗ: ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿನ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ ಕನಿಷ್ಠ 16 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಂತಿ ಭೇದಿಯಿಂದ ಬಳಲುತ್ತಿದ್ದ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕವಾಡಿಗರಹಟ್ಟಿಯ ರುದ್ರಪ್ಪ (50) ಇಂದು ಬೆಳಗ್ಗೆ ಸಾವಿಗೀಡಾಗಿದ್ದಾರೆ. ಇದೇ ವೇಳೆ, ಪಾರ್ವತಮ್ಮ (60) ಶುಕ್ರವಾರ ಕವಾಡಿಗರಹಟ್ಟಿಯ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.


Provided by

ಪಾರ್ವತಮ್ಮ ಅವರು ಮೂರು ದಿನಗಳಿಂದ ಅವರು ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾಗುತ್ತಿದ್ದರಿಂದ ಆಸ್ಪತ್ರೆಯಿಂದ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಆದರೆ, ಪಾರ್ವತಮ್ಮ ಅವರು ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಸಾವಿಗೀಡಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ