ಪೋಷಕರಿಗೆ ಸಿಹಿ ಸುದ್ದಿ | ಖಾಸಗಿ ಶಾಲೆಗಳ ಶುಲ್ಕದಲ್ಲಿ ಶೇ.30ರಷ್ಟು ಕಡಿತ - Mahanayaka

ಪೋಷಕರಿಗೆ ಸಿಹಿ ಸುದ್ದಿ | ಖಾಸಗಿ ಶಾಲೆಗಳ ಶುಲ್ಕದಲ್ಲಿ ಶೇ.30ರಷ್ಟು ಕಡಿತ

30/01/2021

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಶೇ.30ರಷ್ಟು ಶುಲ್ಕ ಕಡಿತ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಮೂಲಕ ಪೋಷಕರಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ.

ರಾಜ್ಯ ಸರ್ಕಾರದಿಂದ ಇಲಾಖೆ ಅಧಿಯನ ಕಾರ್ಯದರ್ಶಿ ಶಿವಕುಮಾರ್‌  ಹೊರಡಿಸಿರುವ ಆದೇಶದಲ್ಲಿ  2020-21ನೇ ಸಾಲಿನಲ್ಲಿನ ಶಾಲಾ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಶೇ.30ರಷ್ಟು ವಿನಾಯಿತಿಯನ್ನುನೀಡಲಾಗಿದ್ದು, ಶಾಲಾ ಬೋಧನಾ ಶುಲ್ಕವನ್ನು ಹೊರತು ಪಡಿಸಿ ಶಾಲೆಗಳು ಬೇರೆ ಯಾವುದೇ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುವಂತಿಲ್ಲ ಎಂದು ಹೇಳಲಾಗಿದೆ.

ಒಂದು ವೇಳೆ ಪೋಷಕರು ಪೂರ್ಣ ಶುಲ್ಕವನ್ನು ನೀಡಿದ್ದರೆ, ಅಂತವರ ಶುಲ್ಕವನ್ನು ಮುಂದಿನ ವರ್ಷಕ್ಕೆ ಹೊಂದಾಣಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಪೋಷಕರಿಗೆ ಮೂರು ಕಂತುಗಳಲ್ಲಿ ಶುಲ್ಕವನ್ನು ಕಟ್ಟುವಂತೆ ಅವಕಾಶವನ್ನು ನೀಡಬೇಕು ಅಂತ ಹೇಳಿದೆ.

ಇತ್ತೀಚಿನ ಸುದ್ದಿ