ಮಣಿಪುರ ಬೆತ್ತಲೆ ಪ್ರಕರಣ: ಐದು ಪೊಲೀಸ್ ಸಿಬ್ಬಂದಿಗೆ ಅಮಾನತು ಶಿಕ್ಷೆ - Mahanayaka
11:16 PM Thursday 12 - December 2024

ಮಣಿಪುರ ಬೆತ್ತಲೆ ಪ್ರಕರಣ: ಐದು ಪೊಲೀಸ್ ಸಿಬ್ಬಂದಿಗೆ ಅಮಾನತು ಶಿಕ್ಷೆ

06/08/2023

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿರುವ ಘಟನೆ ದೊಡ್ಡ ವಿವಾದ ಸೃಷ್ಟಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಗೊಂಡಿದ್ದು, ಇದೀಗ ಘಟನೆ ನಡೆದ ವ್ಯಾಪ್ತಿಯ ಠಾಣಾಧಿಕಾರಿ ಒಳಗೊಂಡಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಮಣಿಪುರ ಪೊಲೀಸರು ಅಮಾನತುಗೊಳಿಸಿದ್ದಾರೆ.

ಮೇ 4ರಂದು ಇಬ್ಬರು ಮಹಿಳೆಯರ ಬೆತ್ತೆಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಆದರೆ ಕರ್ತವ್ಯ ಲೋಪ ಹಿನ್ನಲೆ ಮಣಿಪುರದ ನೊಂಗ್ ಪೊಕ್ ಸೆಕ್ಮಯ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಇತರ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 3 ರಂದು ಬಿಷ್ಣುಪುರದಲ್ಲಿ ಶಸ್ತ್ರಾಗಾರದ ಲೂಟಿಗೆ ಕಾರಣವಾದ ಘಟನೆಗಳನ್ನು ತನಿಖೆ ಮಾಡಲು ರಾಜ್ಯ ಪೊಲೀಸರು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಿದ್ದಾರೆ ಎಂದು ಅವರು ಹೇಳಿದರು. ಬಿಷ್ಣುಪುರ್ ಜಿಲ್ಲೆಯ ನರನ್ಸೇನಾದಲ್ಲಿರುವ 2 ನೇ ಇಂಡಿಯಾ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಕೇಂದ್ರ ಕಚೇರಿಯಿಂದ ಇತ್ತೀಚೆಗೆ ಶಸ್ತ್ರಾಸ್ತ್ರಗಳು ಮತ್ತು ಸುಮಾರು 19,000 ಬುಲೆಟ್‌ಗಳನ್ನು ಲೂಟಿ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಇನ್‌ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯೊಬ್ಬರು ವಿಚಾರಣೆಯ ನೇತೃತ್ವ ವಹಿಸಿದ್ದು, ಆರು ವಾರಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ 300 ಮಂದಿ ಬಂಧಿಸಲಾಗಿದ್ದು, ಜನಾಂಗೀಯ ಘರ್ಷಣೆಯ ಸಮಯದಲ್ಲಿ ಅನೇಕ ಝೀರೋ ಎಫ್‌ಐಆರ್‌ಗಳು ದಾಖಲಾಗಿವೆ ಮತ್ತು ಪ್ರತಿ ಪ್ರಕರಣಗಳನ್ನು ಪರಿಶೀಲನೆ ನಡೆಸಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ