ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ: ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತೆ ಎಂದ ಭಾರತೀಯ ಸಂಪಾದಕರ ಕೂಟ
ಕೇಂದ್ರ ಸರ್ಕಾರದ ಪ್ರಸ್ತಾವಿತ ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ ಹಾಗೂ ನಿಯತಕಾಲಿಕಗಳ ಮುದ್ರಣ ಹಾಗೂ ನೋಂದಣಿ ಮಸೂದೆಯು ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂದು ಭಾರತೀಯ ಸಂಪಾದಕರ ಕೂಟವು ಆತಂಕ ವ್ಯಕ್ತಪಡಿಸಿದೆ.
ಪತ್ರಕರ್ತರು ಮತ್ತು ಅವರ ಮೂಲಗಳನ್ನು ಒಳಗೊಂಡಂತೆ ನಾಗರಿಕರ ಕಣ್ಗಾವಲುಗಾಗಿ ಡಿಪಿಡಿಪಿ ಮಸೂದೆಯು ಶಕ್ತಗೊಳಿಸುವ ಚೌಕಟ್ಟನ್ನು ರಚಿಸುತ್ತದೆ ಎಂದು ಸಂಪಾದಕರ ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಈ ಎರಡೂ ಮಸೂದೆಗಳು ಮಾಧ್ಯಮ ಸಂಸ್ಥೆಗಳ ಕಾರ್ಯ ನಿರ್ವಹಣೆಯನ್ನು ನಿರ್ಬಂಧಿಸುತ್ತವೆ. ಸಂಸ್ಥೆಗಳ ಮೇಲೆ ಸೆನ್ಸಾರ್‌ಶಿಪ್‌ನ ಹಿಡಿತ ಹಾಗೂ ಅನಿಯಂತ್ರಿತ ತಪಾಸಣೆಗೆ ಒತ್ತು ನೀಡುತ್ತವೆ. ಹಾಗಾಗಿ, ಕೂಡಲೇ ಲೋಕಸಭೆಯ ಸ್ಪೀಕರ್ ಹಾಗೂ ರಾಜ್ಯಸಭಾ ಸಭಾಪತಿ ಅವರು, ಈ ಮಸೂದೆಗಳನ್ನು ಸಂಸದೀಯ ಸಮಿತಿಯ ಮರುಪರಿಶೀಲನೆಗಾಗಿ ವಾಪಸ್ ಕಳುಹಿಸಬೇಕು ಎಂದು ಕೂಟವು ಒತ್ತಾಯಿಸಿದೆ.
ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್, ಐಟಿ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಂಸತ್ತಿನಲ್ಲಿ ರಾಜಕೀಯ ಪಕ್ಷಗಳ ನಾಯಕರಿಗೆ ಮಸೂದೆಯ ಬಗ್ಗೆ ತನ್ನ ಕಳವಳದ ಬಗ್ಗೆಯೂ ಅದು ಬರೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw