UDUPI: ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ ಸಿಐಡಿ ತನಿಖೆಗೆ ಆದೇಶ
ಉಡುಪಿ, ಆ.7: ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ರಾಜ್ಯ ಸರಕಾರ ಇಂದು ಆದೇಶ ನೀಡಿದೆ.
ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ವರ್ಷದ ವಿದ್ಯಾರ್ಥಿನಿಯೊಬ್ಬಳ ವಿಡಿಯೋ ಚಿತ್ರೀಕರಣ ಮಾಡ ಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಕಾರಣವಾಗಿ ವಿವಾದ ಸೃಷ್ಠಿಸಿತ್ತು.
ಈ ಸಂಬಂಧ ವಾರದ ಬಳಿಕ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದರು. ಬಳಿಕ ತನಿಖಾಧಿಕಾರಿಯನ್ನು ಬದಲಾಯಿಸಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸ್ ತಂಡವು ಮಂಗಳವಾರ ಉಡುಪಿಗೆ ಆಗಮಿಸಿ, ಎಸ್ಪಿ ಹಾಗೂ ತನಿಖಾಧಿಕಾರಿಯೊಂದಿಗೆ ಚರ್ಚಿಸಿ ಎಲ್ಲ ದಾಖಲೆ ಗಳನ್ನು ಪೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw