ಸ್ಮಶಾನವಿಲ್ಲದೇ ಮೃತವ್ಯಕ್ತಿಯ ಅಂತ್ಯ ಸಂಸ್ಕಾರ ನಡೆಸಲು ಪರದಾಡಿದ ಗ್ರಾಮಸ್ಥರು

ಮೃತವ್ಯಕ್ತಿಯ ಅಂತ್ಯಸಂಸ್ಕಾರ ನಡೆಸಲು ಸ್ಮಶಾನವಿಲ್ಲದೆ ಗ್ರಾಮಸ್ಥರು ಪರದಾಡಿದ ಘಟನೆ ಚಾಮರಾಜನಗರ ತಾಲೂಕಿನ ಹರದನಹಳ್ಳಿ ಎಂಬಲ್ಲಿ ನಡೆದಿದೆ.
76 ವರ್ಷದ ಸಿದ್ದಶೆಟ್ಟಿ ಮೃತ ವ್ಯಕ್ತಿಯಾಗಿದ್ದಾರೆ.ಇವರಿಗೆ ಸ್ವಂತ ಜಮೀನು ಇಲ್ಲದ ಕಾರಣ ಅಂತಿಮ ಸಂಸ್ಕಾರಕ್ಕೆ ಜಾಗವಿಲ್ಲದೆ ಗ್ರಾಮಸ್ಥರು ಪರದಾಡಿದ್ದಾರೆ.
ಕೊನೆಗೆ ವಿಧಿ ಇಲ್ಲದೆ ಸಿದ್ದಶೆಟ್ಟಿಎಂಬವರ ಕೆಸರು ತುಂಬಿದ ಜಾಗದಲ್ಲೇ ಅಂತ್ಯಕ್ರಿಯೆ ನೇರವೇರಿಸಿದ್ದಾರೆ.
ಈ ಊರಿನಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಜನರು ವಾಸಿಸುತ್ತಿದ್ದು ಇಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದೆ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.ಈ ಬಗ್ಗೆ ಜಿಲ್ಲಾಡಳಿತಕ್ಕೆ ಸಾಕಷ್ಟುಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ ಸರ್ಕಾರಿ ಜಾಗವಿದ್ದರು ಸ್ಮಶಾನ ನಿರ್ಮಾಣ ಮಾಡದೇ ನಿರ್ಲಕ್ಯ ಮಾಡುತಿರುವ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತು ಸರ್ಕಾರಿ ಜಾಗದಲ್ಲಿ ಸ್ಮಶಾನ ನಿರ್ಮಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw