ಬಸ್ ಮರಕ್ಕೆ ಗುದ್ದಿದ ರಭಸಕ್ಕೆ ಬಸ್ ಮೇಲೆಯೇ ಬಿತ್ತು ಮರದ ಕೊಂಬೆ
ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯೊಡೆದ
ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್. ಆರ್.ಪುರ ತಾಲೂಕಿನ ಸೀಕೆ ಗ್ರಾಮದಲ್ಲಿ ನಡೆದಿದೆ.
ಬಸ್ ಮರಕ್ಕೆ ಗುದ್ದಿದ ರಭಸಕ್ಕೆ ಮರದ ಕೊಂಬೆ ಮುರಿದು ಬಸ್ ಮೇಲೆ ಬಿದ್ದಿದೆ.
ಎನ್.ಆರ್.ಪುರದಿಂದ ಬೆಳಗ್ಗೆ 6 ಗಂಟೆಗೆ ಮೈಸೂರು ಕಡೆಗೆ ಹೋಗುತ್ತಿದ್ದ ಬಸ್
15 ಕಿ.ಮೀ ತಲುಪಿದ ನಂತರ ಮರಕ್ಕೆ ಡಿಕ್ಕಿಯೊಡೆದಿದೆ.
ಬಸ್ಸಿನಲ್ಲಿ 28 ಜನ ಪ್ರಯಾಣಿಕರಿದ್ದರು. ಡಿಕ್ಕಿ ಹೊಡೆದ ಪರಿಣಾಮ 10-12 ಜನ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು, ಎನ್.ಆರ್.ಪುರ, ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw