ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಮರದಿಂದ ಬಿದ್ದು ಮಹಿಳೆ ಸಾವು

ಪುತ್ತೂರು: ತೆಂಗಿನ ಮರದಿಂದ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ಸುಚಿತ್ರ(30) ಮೃತಪಟ್ಟವರಾಗಿದ್ದಾರೆ. ಇವರು ತೆಂಗಿನಕಾಯಿ ಕೀಳುವ ಕೆಲಸದಲ್ಲಿ ಖ್ಯಾತಿ ಪಡೆದಿದ್ದರು. ಮೃತರು ಪತಿ ಹಾಗೂ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ತೆಂಗಿನ ಕಾಯಿ ಕೀಳುವ ಸಾಹಸಿ ಮಹಿಳೆಯಾಗಿದ್ದ ಸುಚಿತ್ರ ಅವರನ್ನು ಗುರುತಿಸಿ ಹಲವು ಸಂಘಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw