ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣ: ಕಾಲೇಜಿಗೆ ಭೇಟಿ ನೀಡಿದ ಸಿಐಡಿ ಪೊಲೀಸ್ ತಂಡ

ಉಡುಪಿ: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿ ನಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಮುಂದುವರೆದಿದ್ದು, ಸಿಐಡಿ ಪೊಲೀಸ್ ಅಧೀಕ್ಷಕ ರಾಘವೇಂದ್ರ ಕೆ.ಹೆಗ್ಡೆ ನೇತೃತ್ವದ ತಂಡ ಇಂದು ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ.
ಬೆಳಗ್ಗೆ ಕಾಲೇಜಿಗೆ ಆಗಮಿಸಿದ ಸಿಐಡಿ ತಂಡವು, ಘಟನೆ ನಡೆದ ಶೌಚಾಲಯ ವನ್ನು ಪರಿಶೀಲಿಸಿ ಮಾಹಿತಿ ಕಳೆ ಹಾಕಿತು. ಬಳಿಕ ಆಡಳಿತ ಮಂಡಳಿ ನಿರ್ದೇಶಕಿ ರಶ್ಮಿ ಹಾಗೂ ಇತರರನ್ನು ವಿಚಾರಣೆಗೆ ಒಳಪಡಿಸಿದ ತಂಡವು, ಸಂತ್ರಸ್ತ ವಿದ್ಯಾರ್ಥಿನಿಯರ ಹೇಳಿಕೆಯನ್ನು ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw