ಡಿ.ಕೆ.ಶಿವಕುಮಾರ್ ವಿರುದ್ಧ 15% ಕಮಿಷನ್ ಆರೋಪ ಸುಳ್ಳು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು:ಹಿಂದಿನ ಬಿಜೆಪಿ ಸರ್ಕಾರದ 40%, ಆರೋಪಸತ್ಯ ಎಂದಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ 15% ಕಮಿಷನ್ ಅರೋಪ ಸುಳ್ಳು ಎಂದು ಎಂದು ಡಿಕೆಶಿಯನ್ನು ಸಮರ್ಥಿಸಿಕೊಂಡಿದ್ದಾರೆ.ನಗರದಲ್ಲಿಂದು ವಿಧಾನಸೌಧದ ಬಳಿ ಮಾತನಾಡಿದ ಅವರು,
ಗುತ್ತಿಗೆದಾರರಿಗೆ ಬಿಲ್ ಬಾಕಿ ಇರೋದು ಸತ್ಯ. ಬಿಜೆಪಿ ಅವರು ಮಾಡಿದ ಸಾಲದಿಂದ ಇಷ್ಟು ಬಿಲ್ ಬಾಕಿ ಉಳಿದುಕೊಂಡಿದೆ. ಆದರೆ ಯಾರೂ ಕಮಿಷನ್ ಕೇಳಿಲ್ಲ. ಬಿಜೆಪಿಯವರ ಮೇಲೆ 40% ಕಮಿಷನ್ ಆರೋಪ ಸತ್ಯ. ಆದರೆ ನಮ್ಮ ಮೇಲೆ 15% ಕಮಿಷನ್ ಆರೋಪ ಸುಳ್ಳು.ಬಿಜೆಪಿ ಅವಧಿಯಲ್ಲಿ 40% ಕಮಿಷನ್ ಪಡೆದಿದ್ದರು. ನಮ್ಮ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಇವರು ಕಳೆದುಕೊಂಡಿದ್ದಾರೆ. ಬಿಜೆಪಿ ಅವರ ಮಾತಿಗೆ ಕಿಮ್ಮತ್ತಿಲ್ಲ. ಬಿಜೆಪಿ ಅವರಿಗೆ ವಿರೋಧ ಪಕ್ಷದಲ್ಲಿ ಇರಲು ಜನ ಆದೇಶ ಮಾಡಿದ್ದಾರೆ. ನಾಲ್ಕು ಮುಕ್ಕಾಲು ವರ್ಷ ಅವರು ವಿಪಕ್ಷದಲ್ಲೇ ಇರಲಿ ಎಂದು ಲೇವಡಿ ಮಾಡಿದರು
ಬಿಬಿಎಂಪಿಯಲ್ಲಿ ಆಗಿರುವ ಕಾಮಗಾರಿಗಳ ಬಗ್ಗೆ ತನಿಖೆ ಮಾಡಲು 4 ತಂಡಗಳನ್ನು ರಚನೆ ಮಾಡಲಾಗಿದೆ. ಸಮಿತಿ ವರದಿ ಕೊಟ್ಟ ಮೇಲೆ ಬಿಲ್ ಕ್ಲಿಯರ್ ಆಗುತ್ತೆ. ಇನ್ನೂ ಸಮಿತಿ ವರದಿಯನ್ನು ಕೊಟ್ಟಿಲ್ಲ. ಆಗಲೇ ಕಮಿಷನ್ ಆರೋಪ ಮಾಡುತ್ತಿದ್ದಾರೆ.ಬಿಲ್ ಬೇಗ ಬಿಡುಗಡೆ ಮಾಡಬೇಕು ಎಂದು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ. ಬಿಜೆಪಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಕೆಲಸವೇ ಆಗಿಲ್ಲ, ಬಿಲ್ ಎಲ್ಲಿ ಕೋಡೋಣ. ಇದರ ತನಿಖೆಗೆ ತಂಡ ರಚನೆ ಮಾಡಿದ್ದೇವೆ. ತನಿಖೆಯ ವರದಿ ಬರಲಿ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw