ಮೇಘಸ್ಪೋಟ: ಅವಶೇಷಗಳಡಿಯಲ್ಲಿ ಸಿಲುಕಿದ ಒಂದೇ ಕುಟುಂಬದ ಐವರು
ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಇದರ ಪರಿಣಾಮ ಹಳ್ಳಿಗಳಿಗೆ ನೀರು ನುಗ್ಗಿದ್ದು, ಮನೆಗಳು ಕುಸಿದು ಬಿದ್ದಿವೆ. ಈ ನಡುವೆ ಒಂದೇ ಮನೆಯ ಐವರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಪೋಂಟಾ ಸಾಹಿಬ್ ಪ್ರದೇಶದಲ್ಲಿ ಬುಧವಾರ ರಾತ್ರಿ ಮೇಘಸ್ಪೋಟ ಸಂಭವಿಸಿದೆ. ಇದರ ಪರಿಣಾಮ ಮಾಳಗಿ ದಡಿಯಾತ್ ಗ್ರಾಮದ ಹಲವಾರು ಮನೆಗಳಿಗೆ ನೀರು ನುಗ್ಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮನೆಯ ಅವಶೇಷಗಳಡಿಯಲ್ಲಿ ಸಿಂಗ್, ಅವರ ಪತ್ನಿ ಜಿತೋ ದೇವಿ, ರಜನಿ ದೇವಿ, ನಿತೇಶ್ ಮತ್ತು ದೀಪಿಕಾ ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw