ಫ್ಲೈಯಿಂಗ್ ಕಿಸ್ ವಿವಾದ: ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಶಾಸಕಿ
ಲೋಕಸಭೆಯಲ್ಲಿ ತಮ್ಮ ಭಾಷಣವನ್ನು ಮುಗಿಸಿದ ನಂತರ ರಾಹುಲ್ ಗಾಂಧಿ ಅವರು ಬಿಜೆಪಿಯ ಮಹಿಳಾ ಸಂಸದೆಗೆ ‘ಫ್ಲೈಯಿಂಗ್ ಕಿಸ್’ ನೀಡಿದ್ದಾರೆ ಎನ್ನಲಾದ ಆರೋಪದ ಮಧ್ಯೆ, ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
ವೈರಲ್ ವಿಡಿಯೋದಲ್ಲಿ ನೀತು ಸಿಂಗ್, ‘ನಮ್ಮ ರಾಹುಲ್ ಗಾಂಧಿಗೆ ಮಹಿಳೆಯರ ಕೊರತೆ ಇಲ್ಲ. ಅವರು ಫ್ಲೈಯಿಂಗ್ ಕಿಸ್ ನೀಡಬೇಕೂಂತ ಇದ್ದಿದ್ರೆ ಅವರು ಅದನ್ನು ಯುವತಿಗೆ ನೀಡುತ್ತಿದ್ದರು. ಅವರು ಯಾಕೆ ಮುದುಕಿಗೆ ಫ್ಲೈಯಿಂಗ್ ಕಿಸ್ ನೀಡುತ್ತಾರೆ..? ಈ ಎಲ್ಲಾ ಆರೋಪಗಳು ಆಧಾರರಹಿತವಾಗಿವೆ. ವೀಡಿಯೊ ವೈರಲ್ ಆಗುತ್ತಿದ್ದಂತೆ, ಆಡಳಿತಾರೂಢ ಬಿಜೆಪಿಯು ನೀತು ಸಿಂಗ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ.
20 ಕ್ಕೂ ಹೆಚ್ಚು ಮಹಿಳಾ ಸಂಸದರ ಸಮ್ಮುಖದಲ್ಲಿ ರಾಹುಲ್ ಗಾಂಧಿ ಬುಧವಾರ ಸಂಸತ್ತಿನಲ್ಲಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂಬ ಆರೋಪವನ್ನು ಬಿಜೆಪಿ ಸಂಸದೆ ಮಾಡುವ ಮೂಲಕ ಕೋಲಾಹಲವನ್ನು ಉಂಟುಮಾಡಿದ್ದರು. ನಂತರ ಬಿಜೆಪಿ ಸಂಸದೆಯರು ವಯನಾಡ್ ನ ಕಾಂಗ್ರೆಸ್ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಹಿ ಮಾಡಿ ಪತ್ರಕ್ಕೆ ಕಳುಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw