ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅನಾಹುತ: 8ಕ್ಕೂ ಅಧಿಕ ಮಂದಿಗೆ ಗಾಯ - Mahanayaka
4:36 AM Wednesday 11 - December 2024

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅನಾಹುತ: 8ಕ್ಕೂ ಅಧಿಕ ಮಂದಿಗೆ ಗಾಯ

bbmp
11/08/2023

ಬೆಂಗಳೂರು:ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 8ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ.

ಶಿವಕುಮಾರ್-ಸಿಇ, ಸಂತೋಷ್ ಕುಮಾರ್–ಇಇ, ವಿಜಯಲಕ್ಷ್ಮಿ–ಇಇ, ಶ್ರೀಧರ್–ಎಇಇ, ಜ್ಯೋತಿ–ಜೆಇ, ಶ್ರೀನಿವಾಸ್-ಜೆಇ, ಮನೋಜ್–ಕಂಪ್ಯೂಟರ್ ಆಪರೇಟರ್, ಕಿರಣ್–ಇಇ, ಸಿರಾಜ್–ಎಫ್‌ಡಿಎ ಗಾಯಗೊಂಡವರು. ಎಲ್ಲರನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಸಂಜೆ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರೂ ಘಟನಾ ಸ್ಥಳಕ್ಕೆ ಅರ್ಧಗಂಟೆ ತಡವಾಗಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ಸಂಪೂರ್ಣ ನಂದಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ.

ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್ ಗಿರಿನಾಥ್‌ ಅವರು, ಇಂದು ಸಂಜೆ ಸಂಜೆ 5 ರಿಂದ 5.30 ರ ನಡುವೆ ಈ ಘಟನೆ ನಡೆದಿದೆ. ನಾನು ಕಛೇರಿಯಲ್ಲಿದ್ದೆ, ವಿದ್ಯುತ್ ವ್ಯತ್ಯಯವಾಗಿತ್ತು. ನಂತರ ನಮ್ಮ ಕಚೇರಿಯ ಹಿಂಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬುದು ನನಗೆ ತಿಳಿಯಿತು. ನಾನು ಅಲ್ಲಿಗೆ ಹೋದಾಗ, ಕಟ್ಟಡದಲ್ಲಿ ಭಾರಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಿಂದ ಅಪಾರ ನಷ್ಟ ಸಂಭವಿಸಿದೆ. ಅಲ್ಲಿ ಕೆಲಸ ಮಾಡುತ್ತಿದ್ದವರು ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಸೈಂಟ್ ಮಾರ್ಥಾಸ್ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗಕ್ಕೆ ರವಾನಿಸಲಾಗಿದೆ .ಮುಖ್ಯ ಇಂಜಿನಿಯರ್ ಸೇರಿದಂತೆ ಒಂಬತ್ತು ಇಂಜಿನಿಯರ್‌ಗಳಿಗೆ ಗಾಯಗಳಾಗಿವೆ ಎಂದು ಗಿರಿನಾಥ್ ಅವರು ತಿಳಿಸಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಿಂದ ಬೇರೆಕಡೆ ಕಾರ್ಯಕ್ರಮದಲ್ಲಿದ್ದ ಸಿಎಂ ಸಂಜೆ ಅಲ್ಲಿಂದ  ಹೆಚ್ ಎ ಎಲ್ ವಿಮಾನ ನಿಲ್ಸಾಣದಿಂದ ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿದರು. ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದರು. ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.

ವಿಕ್ಟೋರಿಯಾ ಆಸ್ಪತ್ರೆ ಬಳಿಕ ಬಿಬಿಎಂಪಿ ಕೇಂದ್ರ ಕಚೇರಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಯ ಕುರಿತು ವಿವರವಾದ ಮಾಹಿತಿಯನ್ನು ಪಡೆದುಕೊಂಡರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಭೈರತಿ ಸುರೇಶ್ ಅವರುಗಳು ಜತೆಗಿದ್ದರು.

ಇತ್ತೀಚಿನ ಸುದ್ದಿ