ಮುಂಬೈನಲ್ಲಿ 1.49 ಕೋಟಿ ಮೌಲ್ಯದ ವಜ್ರ ವಶ: ಓರ್ವನ ಬಂಧನ
1.49 ಕೋಟಿ ರೂಪಾಯಿ ಮೌಲ್ಯದ ವಜ್ರಗಳನ್ನು (1559.6 ಕ್ಯಾರೆಟ್) ಚಹಾ ಪುಡಿಯ ಪೊಟ್ಟಣದಲ್ಲಿರಿಸಿ ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಮುಂಬೈನಿಂದ ದುಬೈಗೆ ಹೋಗುತ್ತಿದ್ದ ವ್ಯಕ್ತಿ ವಜ್ರ ಕಳ್ಳಸಾಗಣೆ ಮಾಡುತ್ತಿರುವುದಾಗಿ ಕಸ್ಟಮ್ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯ ಬ್ಯಾಗ್ ಪರಿಶೀಲಿಸಿದಾಗ ಚಹಾ ಪೊಟ್ಟಣ ಕಂಡುಬಂದಿದೆ. ಅನುಮಾನಗೊಂಡು ಚಹಾ ಪೊಟ್ಟಣ ತೆರೆದಾಗ ಅದರಲ್ಲಿ, ಚಿಕ್ಕ ಚಿಕ್ಕ ಪೊಟ್ಟಣಗಳಲ್ಲಿ ವಜ್ರಗಳನ್ನು ಅಡಗಿಸಿಟ್ಟಿರುವುದು ತಿಳಿದುಬಂದಿದೆ.
ವಜ್ರಗಳನ್ನು ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw