ದ್ವೇಷ ಭಾಷಣ ಒಳ್ಳೆಯದಲ್ಲ: ಸೌಹಾರ್ದತೆ ಇರಬೇಕು ಎಂದ ಸುಪ್ರೀಂಕೋರ್ಟ್
ವಿವಿಧ ಸಮುದಾಯಗಳ ನಡುವೆ ಸೌಹಾರ್ದತೆ ಮತ್ತು ಸಾಮರಸ್ಯ ಇರಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ದೇಶಾದ್ಯಂತ ನಡೆಯುವ ದ್ವೇಷ ಭಾಷಣದ ಕೇಸ್ ಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಆದೇಶ ನೀಡಿದೆ.
ಹರ್ಯಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ರ್ಯಾಲಿಗಳಲ್ಲಿ ನಿರ್ದಿಷ್ಟ ಸಮುದಾಯದ ಸದಸ್ಯರನ್ನು ಕೊಲ್ಲಲು ಮತ್ತು ಅವರಿಗೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುವ ದ್ವೇಷದ ಭಾಷಣಗಳನ್ನು ಹತ್ತಿಕ್ಕಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ವಿವಿಧ ಸಮುದಾಯಗಳ ನಡುವೆ ಸೌಹಾರ್ದತೆ ಹಾಗೂ ಸಾಮರಸ್ಯ ಇರಬೇಕು. ಇದಕ್ಕೆ ಎಲ್ಲಾ ಸಮುದಾಯಗಳು ಜವಾಬ್ದಾರರಾಗಿರುತ್ತಾರೆ. ಇದು ಉತ್ಪ್ರೇಕ್ಷಿತವಾಗಿದೆಯೇ ಎಂದು ನನಗೆ ತಿಳಿದಿಲ್ಲ. ಆದರೆ ದ್ವೇಷದ ಭಾಷಣದ ಸಮಸ್ಯೆ ಒಳ್ಳೆಯದಲ್ಲ ಮತ್ತು ಅದನ್ನು ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw