ಫಸ್ಟ್ ಬೆಂಚ್ ಸಿಗುವುದಿಲ್ಲ: ಗೃಹಸಚಿವ ಡಾ.ಜಿ.ಪರಮೇಶ್ವರ್ - Mahanayaka
5:59 AM Saturday 28 - December 2024

ಫಸ್ಟ್ ಬೆಂಚ್ ಸಿಗುವುದಿಲ್ಲ: ಗೃಹಸಚಿವ ಡಾ.ಜಿ.ಪರಮೇಶ್ವರ್

dr g parameshwar
16/08/2023

ಬೆಂಗಳೂರು, ಆ .16: ಪಕ್ಷ ಬಿಟ್ಟು ಹೋದವರು ಮತ್ತೆ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬಂದಿರುವ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೆಂಚ್ ಸಿಗುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಹೇಳಿ ಶಾಸಕರು ಬರಬಹುದು. ಬಿಜೆಪಿಯಿಂದ ಬರೋ ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು

ತಪ್ಪು ಮಾಡಿದ್ದನ್ನು ಸರಿ ಮಾಡಿಕೊಳ್ಳುತ್ತೇವೆ ಎಂದರೆ ಮಾಡಿಕೊಂಡು ಬರಬಹುದು. ಫಸ್ಟ್ ಬೆಂಚ್ ಸಿಗದೇ ಹೋದರೂ ಅವರಿಗೆ ಕ್ಲಾಸ್ ರೂಂಗೆ ಅವಕಾಶ ಇದೆ. ಅವರು ಮತ್ತೆ ಫಸ್ಟ್ ಬೆಂಚ್ ಸಿಗಬೇಕಾದರೆ ತುಂಬಾ ದಿನ ಆಗುತ್ತದೆ.ಈಗಾಗಲೇ ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಹೇಳಿದ್ದಾರೆ. ಪರಿಶೀಲನೆ ಮಾಡಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಐಡಿಯಾಲಜಿ ನಂಬಿ, ಕಾಂಗ್ರೆಸ್ ಲೀಡರ್‌ಶಿಪ್ ಮೇಲೆ ನಂಬಿಕೆ ಇಟ್ಟು ಪಕ್ಷಕ್ಕೆ ಬಂದರೆ ಬರಬಹುದು. ಹಿಂದೆ ಪಕ್ಷ ಬಿಟ್ಟು ಹೋದವರು ಕೂಡಾ ಬರಬಹುದು ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ