ರಾಜಸ್ಥಾನ ವಿಶ್ವವಿದ್ಯಾಲಯದ ಭದ್ರತಾ ಅಧಿಕಾರಿಯಿಂದ ವಿದ್ಯಾರ್ಥಿನಿಯ ಫೋಟೋ ವೈರಲ್: ಉದ್ರಿಕ್ತ ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್ - Mahanayaka
8:24 PM Saturday 21 - September 2024

ರಾಜಸ್ಥಾನ ವಿಶ್ವವಿದ್ಯಾಲಯದ ಭದ್ರತಾ ಅಧಿಕಾರಿಯಿಂದ ವಿದ್ಯಾರ್ಥಿನಿಯ ಫೋಟೋ ವೈರಲ್: ಉದ್ರಿಕ್ತ ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್

19/08/2023

ತನ್ನ ಅನುಮತಿ ಇಲ್ಲದೇ ಭದ್ರತಾ ಅಧಿಕಾರಿ ತನ್ನ ಫೋಟೋವನ್ನು ಕ್ಲಿಕ್ಕಿಸಿ ಪ್ರಸಾರ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ ನಂತರ ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸಿದರು. ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ವಿಶ್ವವಿದ್ಯಾಲಯ ಆದೇಶಿಸಿದೆ. ‘ಈ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವುದನ್ನು ನಾವು ಖಚಿತಪಡಿಸುತ್ತೇವೆ. ಪರಿಶೀಲನೆ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಉಪಕುಲಪತಿ ಪ್ರೊ.ಆನಂದ್ ಭಲೇರಾವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ನಾವು ಇತ್ತೀಚಿನ ದಿನಗಳಲ್ಲಿ ಕೆಲವು ದೂರುಗಳನ್ನು ಸ್ವೀಕರಿಸಿದ್ದೇವೆ. ಈ ವಿಷಯದ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರಾಗಿರುವ ಒಂಬುಡ್ಸ್ಮನ್ ಅನ್ನು ನಿಯೋಜಿಸಿದ್ದೇವೆ’ ಎಂದು ಅವರು ಹೇಳಿದರು. ಉದ್ರಿಕ್ತ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ವಿಷಯದಲ್ಲಿ ಇನ್ನೂ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಎಂದು ಬಂದರ್ ಸಿಂದ್ರಿ ಪೊಲೀಸ್ ಠಾಣೆಯ ಎಸ್ಎಚ್ಒ ದಲ್ಪತ್ ಸಿಂಗ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ