ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಮೈಸೂರಿಗೆ ಶಿಫ್ಟ್: ಕಾರಣ ಏನ್ ಗೊತ್ತಾ?
19/08/2023
ಬೆಂಗಳೂರು: ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮವು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ತಿಂಗಳ 30ರಂದು ರಾಹುಲ್ ಗಾಂಧಿ ಅವರು ಮೈಸೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅದೇ ದಿನ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದೆ. ಹೀಗಾಗಿ ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹ ಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ನೀಡುವ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲೊಂದಾದ ಕಾರ್ಯಕ್ರಮಕ್ಕೆ ಈ ತಿಂಗಳ 30ರಂದು ಚಾಲನೆ ಸಿಗಲಿದೆ.