ಒಂದೇ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ | ಕಾಲೇಜು, ಹಾಸ್ಟೇಲ್ ಸೀಲ್ ಡೌನ್ - Mahanayaka
11:05 PM Wednesday 11 - December 2024

ಒಂದೇ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ | ಕಾಲೇಜು, ಹಾಸ್ಟೇಲ್ ಸೀಲ್ ಡೌನ್

03/02/2021

ಮಂಗಳೂರು: ಕೊರೊನಾ ನಡುವೆ ಕಾಲೇಜುಗಳು ಕಾರ್ಯಾರಂಭವಾಗಿ ಯಶಸ್ವಿಯಾಗಿ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಂಗಳೂರಿನ ಒಂದೇ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಕಾಲೇಜಿನ 100 ವಿದ್ಯಾರ್ಥಿಗಳ ಪೈಕಿ 48 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ನಲ್ಲಿ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಈ ಪ್ರದೇಶವನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.

ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿರುವ ವಿದ್ಯಾರ್ಥಿಗಳು ಹಾಸ್ಟೆನ್ ನಲ್ಲಿ ಉಳಿದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದರು. ಈ ಎಲ್ಲ 48 ವಿದ್ಯಾರ್ಥಿಗಳು ಕೂಡ ಕೇರಳ ಮೂಲದ ವಿದ್ಯಾರ್ಥಿಗಳು ಎಂದು ವರದಿಯಾಗಿದೆ. ಇನ್ನೂ ಕೊರೊನಾ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಹಾಸ್ಟೆಲ್ ನ್ನು ಸೀಲ್ ಡೌನ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ