ಇಸ್ರೋ ವಿಜ್ಞಾನಿಗಳಿಗೆ ವಿಕ್ರಂ ಲ್ಯಾಂಡರ್‌ ನ ಮಾದರಿ ನೀಡಿದ ಬಾಲಕ - Mahanayaka
5:39 AM Wednesday 5 - February 2025

ಇಸ್ರೋ ವಿಜ್ಞಾನಿಗಳಿಗೆ ವಿಕ್ರಂ ಲ್ಯಾಂಡರ್‌ ನ ಮಾದರಿ ನೀಡಿದ ಬಾಲಕ

03/09/2023

 

ಬೆಂಗಳೂರು: ಪುಟ್ಟ ಬಾಲಕ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ವಿಕ್ರಂ ಲ್ಯಾಂಡರ್‌ ನ ಮಾದರಿಯನ್ನು ರಚಿಸಿ, ಎಲ್ಲರ ಪರವಾಗಿ ಇಸ್ರೋ ಅಧ್ಯಕ್ಷರಿಗೆ ನೀಡಿದ್ದಾನೆ.

ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಎಸ್. ಸೋಮನಾಥ್ ಅವರಿಗೆ ಪುಟ್ಟ ಪೋರನೋರ್ವ ವಿಕ್ರಂ ಲ್ಯಾಂಡರ್ (Vikram Lander) ಮಾದರಿಯನ್ನು ಗಿಫ್ಟ್ ಕೊಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾನೆ‌

ಇಸ್ರೋ ವಿಜ್ಞಾನಿ ಪಿವಿ ವೆಂಕಟಕೃಷ್ಣನ್ ಅವರು ಟ್ವಿಟ್ಟರ್‌ನಲ್ಲಿ ಈ ಸುಂದರ ಕ್ಷಣದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಬಾಲಕ ಎಸ್ ಸೋಮನಾಥ್ ಅವರಿಗೆ ಗಿಫ್ಟ್ ನೀಡುತ್ತಿರುವ ಚಿತ್ರವನ್ನು ಸಹಾ ಹಂಚಿಕೊಂಡಿದ್ದಾರೆ. ಈ ಕ್ಯೂಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಮನಗೆದ್ದಿದೆ.

ಇತ್ತೀಚಿನ ಸುದ್ದಿ