ಕು.ಸೌಜನ್ಯ ಹತ್ಯೆ ಪ್ರಕರಣ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ ಮಾಡಿದ ಬಿಜೆಪಿ ನಿಯೋಗ
04/09/2023
ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕು.ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರನ್ನು ಬಿಜೆಪಿ ನಿಯೋಗ ಮನವಿ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದ ನಿಯೋಗ ಇಂದು ಈ ಕುರಿತು ಮನವಿ ಸಲ್ಲಿಸಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರು ಈ ನಿಯೋಗದಲ್ಲಿ ಇದ್ದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ರಾಜ್ಯದ ಮಾಜಿ ಸಚಿವ ವಿ. ಸುನೀಲ್ ಕುಮಾರ್, ಶಾಸಕರಾದ ಕು.ಭಾಗೀರಥಿ ಮುರಳ್ಯ, ವೇದವ್ಯಾಸ್ ಕಾಮತ್, ಡಾ.ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಗುರ್ಮೆ ಸುರೇಶ್ ಶೆಟ್ಟಿ ಮತ್ತಿತರರು ನಿಯೋಗದಲ್ಲಿ ಇದ್ದರು.