ಅಯ್ಯೋ ದುರ್ವಿದಿಯೇ…: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು
10/09/2023
ತುಮಕೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂಟಲಗೆರೆಯಲ್ಲಿ ನಡೆದಿದೆ.
ತಿಮ್ಮನಹಳ್ಳಿ ನಿವಾಸಿಗಳಾದ ರಾಕೇಶ್(14), ಧನುಷ್(15) ಮೃತ ಬಾಲಕರಾಗಿದ್ದಾರೆ. ಬಾಲಕರ ಸಾವಿನ ಹಿನ್ನೆಲೆಯಲ್ಲಿ ಮೃತ ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ, ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.