‘ಚಕ್ಕಾಜಾಮ್’: ಬೆಂಗಳೂರಿನಲ್ಲಿ ಪ್ರತಿಭಟನಾಕಾರರ ಬಂಧನ - Mahanayaka
5:57 AM Thursday 12 - December 2024

‘ಚಕ್ಕಾಜಾಮ್’: ಬೆಂಗಳೂರಿನಲ್ಲಿ ಪ್ರತಿಭಟನಾಕಾರರ ಬಂಧನ

06/02/2021

ಬೆಂಗಳೂರು: ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ರಾಜ್ಯದ ಹಲವೆಡೆ ಹೆದ್ದಾರಿ ತಡೆದು ‘ಚಕ್ಕಾ ಜಾಮ್’ ನಡೆಸುತ್ತಿದ್ದು, ಇದೇ ಸಂದರ್ಭ ಬೆಂಗಳೂರಿನಲ್ಲಿ ಪ್ರತಿಭಟಿಸುತ್ತಿರುವ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಮಧ್ಯಾಹ್ನ ಹಲವು ಷರತ್ತುಗಳನ್ನು ವಿಧಿಸಿ ಪೊಲೀಸರು ಮಧ್ಯಾಹ್ನ 3ರವರೆಗೆ ಹೆದ್ದಾರಿ ಬಂದ್ ಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗಿತ್ತು.  ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಬಾರದು,  ಸಾರ್ವಜನಿಕರಿಗೆ ತೊಂದರೆ ಕೊಡಬಾರದು ಮೊದಲಾದ ಷರತ್ತುಗಳನ್ನು ವಿಧಿಸಲಾಗಿತ್ತು ಎಂದು ವರದಿಯಾಗಿದೆ.

ಚಕ್ಕಾ ಜಾಮ್ ಅಂಗಕವಾಗಿ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದ  ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ