ಸಹಸ್ರಾರು ಮಂದಿಯಿಂದ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರಜಾಪ್ರಭುತ್ವ ದಿನಾಚರಣೆ - Mahanayaka
12:56 PM Tuesday 17 - December 2024

ಸಹಸ್ರಾರು ಮಂದಿಯಿಂದ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರಜಾಪ್ರಭುತ್ವ ದಿನಾಚರಣೆ

udupi
15/09/2023

ಉಡುಪಿ: ಏಕಕಾಲದಲ್ಲಿ ರಾಜ್ಯಾದ್ಯಂತ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಿ ವಿಶ್ವದಾಖಲೆಯನ್ನು ನಿರ್ಮಿಸಲು ಯೋಜನೆಯಂತೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸಂವಿಧಾನ ಪೀಠಿಕೆಯನ್ನು ಓದಿದರು.

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ದರು. ಬಳಿಕ ಜಿಲ್ಲಾಧಿಕಾರಿ ಸಂವಿಧಾನದ ಪೀಠಿಕೆಯನ್ನು ಓದಿದರು. ಅದರಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿ ಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸುಮಾರು ಸಾವಿರಾರು ಮಂದಿ ಭಾಗವಹಿಸಿ ಸಂವಿಧಾನದ ಪೀಠಿಕೆ ಯನ್ನು ಓದಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಓ ಪ್ರಸನ್ನ ಎಚ್., ನ್ಯಾಯಾಧೀಶೆ ಶರ್ಮಿಳಾ, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಯ್ಯ, ಡಿವೈಎಸ್ಪಿ ದಿನಕರ್, ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಸುಮಾ ಮೊದಲಾದವರು ಉಪಸ್ಥಿತರಿದ್ದರು.

ಅದೇ ರೀತಿ ಜಿಲ್ಲೆಯ ಎಲ್ಲ ಸರಕಾರಿ, ಅನು ದಾನಿತ ಹಾಗೂ ಅನುದಾನ ರಹಿತ ಶೈಕ್ಷಣಿಕ ಸಂಸ್ಥೆಗಳು, ಮಣಿಪಾಲ ಮಾಹೆ, ಸರಕಾರಿ, ಅರೆ ಸರಕಾರಿ, ನಿಗಮ ಮಂಡಳಿಗಳು, ಗ್ರಾಪಂ ಕೇಂದ್ರಗಳಲ್ಲಿ ಸಿಬ್ಬಂದಿ, ಸಾರ್ವಜನಿಕರು, ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕಾರ್ಮಿಕರು, ನೌಕರರು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿಯೂ ಏಕಕಾಲದಲ್ಲಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು.

ಇತ್ತೀಚಿನ ಸುದ್ದಿ