ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ - Mahanayaka

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

arest
23/09/2023

“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಈ ದಿನ ಮುಂದುವರಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜಾಕೀರ್(29), ಕಾರ್ತಿಕ್ ಸುವರ್ಣ(27), ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಉಳ್ಳಾಲಬೈಲ್ ಪರಿಸರದಲ್ಲಿ ವ್ಯಕ್ತಿಗಳಿಬ್ಬರು ಅಕ್ರಮವಾಗಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅವರ ವಶದಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಎರಡು ಮೊಬೈಲ್, ನಗದು 3300/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,15,000 ಆಗಬಹುದು. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳ ಪೈಕಿ ಜಾಕೀರ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಇನ್ನೋರ್ವ ಆರೋಪಿ ಕಾರ್ತಿಕ್ ಎಂಬಾತನ ವಿರುದ್ದ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ