ಪೊಲೀಸರ ಮನೆಗೆ ನುಗ್ಗಿದ ಕಳ್ಳರ ಪರಿಸ್ಥಿತಿ ಏನಾಯ್ತು ನೋಡಿ! - Mahanayaka
12:23 AM Thursday 12 - December 2024

ಪೊಲೀಸರ ಮನೆಗೆ ನುಗ್ಗಿದ ಕಳ್ಳರ ಪರಿಸ್ಥಿತಿ ಏನಾಯ್ತು ನೋಡಿ!

police
30/10/2023

ತುಮಕೂರು: ಮನೆಯೊಂದರಲ್ಲಿ ಯಾರೂ ಇಲ್ಲದನ್ನು ಖಚಿತಪಡಿಸಿಕೊಂಡ ಚೋರರು ಹಾಡಹಗಲೇ ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ವಿದ್ಯಾನಗರದಲ್ಲಿ ಘಟನೆ ನಡೆದಿದೆ

ಪೊಲೀಸ್ ಸಿಬ್ಬಂದಿಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ದೋಚುವಾಗಲೇ ಖತರ್ನಾಕ್ ಖದೀಮರು ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಡವನಹಳ್ಳಿ ಪೊಲೀಸ್‌ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಹೇಶ್ ಅವರು ಕುಟುಂಬ ಸಮೇತ ಹೊರಗೆ ಹೋಗಿದ್ದರು. ಕಾರೊಂದರಲ್ಲಿ ಬಂದಿದ್ದ ನಾಲ್ವರು ಖದೀಮರು ಮನೆ ಬಾಗಿಲಿಗೆ ಬೀಗ ಹಾಕಿದ್ದನ್ನು ಗಮನಿಸಿದ್ದಾರೆ. ಕೂಡಲೇ ಅಲರ್ಟ್ ಆದ ಅವರು ಕೈಗೆ ಗೌಸ್ ಹಾಕಿಕೊಂಡು ಮಾರಕಾಸ್ತ್ರಗಳನ್ನು ಹಿಡಿದು ಬಾಗಿಲ ಬೀಗ ಮುರಿದಿದ್ದಾರೆ. ಮನೆಯೊಳಗೆ ಇಬ್ಬರು ಹೋದರೆ, ಮತ್ತಿಬ್ಬರು ಕಾರಿನೊಳಗೆ ಕುಳಿತು ವಾಚ್ ಮಾಡುತ್ತಿದ್ದರು.

ಆದರೆ ಈ ಖದೀಮರ ಚಲನವಲನ ಗಮನಿಸಿದ ಅಕ್ಕ-ಪಕ್ಕದ ಮನೆಯವರು ಅನುಮಾನಗೊಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿದ್ದನ್ನು ಕಂಡು ಮನೆಯ ಹೊರಗೆ ಕಾರಿನಲ್ಲಿ ಕುಳಿತಿದ್ದ ಇಬ್ಬರು ಖದೀಮರು ಪರಾರಿ ಆಗಿದ್ದಾರೆ.

ಇತ್ತ ಮನೆಯೊಳಗೆ ಇನ್ನಿಬ್ಬರು ಇರುವುದನ್ನು ಖಚಿತ ಪಡಿಸಿಕೊಂಡ ಪೊಲೀಸರು ಒಳಗೆ ನುಗ್ಗಿದ್ದಾರೆ. ಇತ್ತ ಮನೆಯೊಳಗೆ ಇನ್ನಿಬ್ಬರು ಇರುವುದನ್ನು ಖಚಿತ ಪಡಿಸಿಕೊಂಡ ಪೊಲೀಸರು ಒಳಗೆ ನುಗ್ಗಿದ್ದಾರೆ. ಚಿನ್ನಾಭರಣವನ್ನೆಲ್ಲ ದೋಚಿಕೊಳ್ಳುತ್ತಿದ್ದ ಖದೀಮರನ್ನು ಹಿಡಿಯಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಡ್ಯಾಗರ್‌ನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಶಿರಾ ನಗರ ಪೊಲೀಸ್ ಠಾಣೆಯ ಕ್ರೈಂ ಸಿಬ್ಬಂದಿ ಧರ್ಮೇಶ್ ಮತ್ತು ಖಲೀಲ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆದರೆ ಪೊಲೀಸರು ಸಿಕ್ಕ ಕಳ್ಳರನ್ನು ಹಿಡಿದಿದ್ದಾರೆ.

ಇತ್ತ ಖದೀಮನೊಬ್ಬ ಚಾಕುವಿನಿಂದ ತಾನೇ ಹೊಟ್ಟೆಗೆ ಚುಚ್ಚಿಕೊಂಡು ಹೈಡ್ರಾಮಾ ಮಾಡಿದ್ದಾನೆ. ಸ್ಥಳೀಯರ ಸಹಾಯದೊಂದಿಗೆ ಸೆರೆ ಸಿಕ್ಕ ಇಬ್ಬರು ಖದೀಮರನ್ನು ಹಗ್ಗದಿಂದ ಕಟ್ಟಿ ಹಾಕಿದ್ದಾರೆ.

ಬಂಧಿತರು ರಿಯಾದ್‌ ಮತ್ತು ಖಾಲಿದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಆರೋಪಿಗೆ ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊರಗೆ ಕಾರಿನಲ್ಲಿ ಕುಳಿತು ವೀಕ್ಷಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಇನ್ನು ಈ ಸಂಬಂಧ ಶೀರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ