ಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಸಾವಿಗೆ ಶರಣು!
ಚಿಕ್ಕಮಗಳೂರು: ಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಕರ್ತಿಕೆರೆ ಸಮೀಪದ ಬೈರಾಪುರ ಗ್ರಾಮದ ಪ್ರಸನ್ನ ಕುಮಾರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ಮಂಗಳೂರಿನ ಸಮೀಪದಲ್ಲಿ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈರಾಪುರ ಗ್ರಾಮದ ಶಂಕರೇಗೌಡ ಎಂಬುವವರ ಪುತ್ರ ಪ್ರಸನ್ನ ಕುಮಾರ್ (40 ವರ್ಷ) ನದಿಗೆ ಹಾರಿರುವ ವ್ಯಕ್ತಿಯಾಗಿದ್ದಾರೆ.
ಪ್ರಸನ್ನಕುಮಾರ್ ತರಕಾರಿ, ಕೊತ್ತಂಬರಿ ಸೊಪ್ಪು ವ್ಯಾಪಾರ ಮಾಡಿಕೊಂಡಿದ್ದರು. ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ಕೊತ್ತಂಬರಿ ಸೊಪ್ಪು ಸರಬರಾಜು ಮಾಡುತ್ತಿದ್ದರು. ಇವತ್ತು ಬೆಳಿಗ್ಗೆ ವ್ಯಾಪಾರದ ಹಣ ಬರಲು ಇದೆ, ವಸೂಲಿ ಮಾಡಿಕೊಂಡು ಬರುವುದಾಗಿ ಮನೆಯಲ್ಲಿ ಹೇಳಿ ಮಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ.
ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಕಾರಿನ ಪೋಟೋ ತೆಗೆದು ಮಾಹಿತಿ ಹಂಚಿಕೊಂಡಿದ್ದು, ನದಿಗೆ ಹಾರಿದ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗಿದೆ.
ಪ್ರಸನ್ನಕುಮಾರ್ ಉತ್ತಮ ಆರ್ಥಿಕ ಹಿನ್ನಲೆ ಹೊಂದಿದ್ದು, ಇತ್ತೀಚೆಗೆ ಹೊಸ ಮನೆಯನ್ನು ಕಟ್ಟಿಸಿದ್ದರು ಎನ್ನಲಾಗಿದೆ. ಪ್ರಸನ್ನ ಕುಮಾರ್ ವಿವಾಹಿತರಾಗಿದ್ದು, ಇಬ್ಬರು ಚಿಕ್ಕ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದವರು ಎಂದು ತಿಳಿದುಬಂದಿದೆ. ಅವರು ನದಿಗೆ ಹಾರಿರುವುದಕ್ಕೆ ಕಾರಣ ತಿಳಿದುಬಂದಿಲ್ಲ, ಘಟನೆ ಅನುಮಾನಾಸ್ಪದವಾಗಿದೆ. ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw