ಕಾಪು, ಬೈಂದೂರು ವ್ಯಾಪ್ತಿಯಲ್ಲಿ ಹೊಸ ಇಂದಿರಾ ಕ್ಯಾಂಟೀನ್ ಶೀಘ್ರವೇ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ಒದಗಿಸಲು ನಾಲ್ಕು ಇಂದಿರಾ ಕ್ಯಾಂಟೀನ್ಗಳನ್ನು ಪ್ರಾರಂಭಿಸಿ, ಉಪಹಾರ ಹಾಗೂ ಊಟ ಲಭಿಸುವಂತೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾಪು, ಬೈಂದೂರು ವ್ಯಾಪ್ತಿಯಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಯು 4418 ಮಿ.ಮೀ ಇದ್ದರೆ, 3332 ಮೀ.ಮಿ ರಷ್ಟು ಮಳೆಯಾಗಿ ಶೇ. 25 ಮಳೆಯ ಕೊರತೆಯಾಗಿದೆ. ಈಗಾಗಲೇ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳನ್ನು ಪೂರ್ಣ ಬರ ಪೀಡಿತ ಹಾಗೂ ಬ್ರಹ್ಮಾವರ ತಾಲೂಕುಗಳನ್ನು ಸಾಧಾರಣ ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕಾರ್ಕಳದಲ್ಲಿ 4103 ಹೆ., ಹೆಬ್ರಿಯಲ್ಲಿ 1283.00 ಹೆ. ಹಾಗೂ ಬ್ರಹ್ಮಾವರ ತಾಲೂಕಿನ 8551.00 ಹೆ. ಒಟ್ಟಾರೆ 13937.00 ಹೆ. ಭತತಿದ ಬೆಳೆ ಹಾನಿ ಅಂದಾಜಿಸಿದ್ದು, 11.85 ಕೋಟಿ ರೂ. ಪರಿಹಾರ ಅನುದಾನ ನೀಡಲು ಸರ್ಕಾರಕ್ಕೆ ಪ್ರಸಾತಿವನೆ ಸಲ್ಲಿಸಲಾಗಿದೆ ಎಂದರು.
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಬಜೆ ಡ್ಯಾಂ ಹೂಳು ತೆಗೆಯಲು ಟೆಂಡರ್ ಕರೆಯಲಾಗಿದೆ. ವಾರಾಹಿಯಿಂದ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಫೆಬ್ರವರಿಯಲ್ಲಿ ಮುಗಿಸಲು ಸೂಚಿಸಲಾಗಿದೆ. ಜನಸಾಮಾನ್ಯರೂ ಸಹ ನೀರಿನ ಮಿತ ಬಳಕೆಗೆ ಮುಂದಾಗಬೇಕು ಎಂದು ಅವರು ತಿಳಿಸಿದರು.
ಕನ್ನಡ ಭಾಷೆಯನ್ನು ಉಳಿಸುವ ಮತ್ತು ಬೆಳೆಸುವ ಜವಾಬ್ದಾರಿ ನಾಡಿನ ಯುವ ಸಮುದಾಯದ ಮೇಲಿದೆ. ಭಾಷೆ ನವ ಚೈತನ್ಯವನ್ನು ಮೂಡಿಸಿಕೊಂಡು ಬೆಳೆಯ ಬೇಕಾದರೆ ಅದು ಯುವ ಸಮುದಾಯದಿಂದ ಮಾತ್ರ ಸಾಧ್ಯ. ಯುವ ಜನರು ತಮ್ಮ ದೈನಂದಿನ ಜೀವನದಲ್ಲಿ ಕನ್ನಡ ಬಳಸುವುದರಿಂದ ಮಾತ್ರ ಸಾಧ್ಯ ಎಂದರು. ನಾಡಿನ ನೆಲ, ಜಲ, ಭಾಷೆಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ರಾಜೀ ಮಾಡಿಕೊಳ್ಳದೇ ನಾಡಿನ ಹಿತರಕ್ಷಣೆ ಮಾಡುವ ಜವಾಬ್ದಾರಿ ಹೊಣೆಗಾರಿಕೆ ನಮ್ಮ ಮೇಲಿದೆ. ಇದಕ್ಕೆ ಕನ್ನಡಿಗರೆಲ್ಲರ ಸಹಕಾರ, ಒಗ್ಗಟ್ಟು ಮುಖ್ಯವಾಗಿದೆ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯಬೇಕು, ಸ್ಥಳೀಯ ಭಾಷೆಯ ಮೂಲಕ ಆಡಳಿತ ನಡೆಸಬೇಕೆಂಬುದು ಅವರ ಆಶಯವೂ ಆಗಿತ್ತು. ಅದರಂತೆ ನಮ್ಮ ಸರ್ಕಾರ ರಾಜ್ಯದ ಆಡಳಿತ ಹಾಗೂ ಶಿಕ್ಷಣವನ್ನು ಕನ್ನಡದಲ್ಲಿ ಪರಿಪೂರ್ಣವಾಗಿ ಅನುಷ್ಠಾನಕ್ಕೆ ತರಲು ಮುಂದಾಗಿದೆ.
ಪ್ರಕೃತಿ ಏರುಪೇರುಗಳಿಂದಾಗಿ ವಾಡಿಕೆ ಮಳೆ ಬಾರದೇ ರಾಜ್ಯದ 20ಕ್ಕೂ ಹೆಚ್ಚು ತಾಲೂಕುಗಳಲ್ಲಿ ಮಳೆಯು ಕುಂಠಿತವಾಗಿ ಬರದ ಛಾಯೆ ಕಾಣಿಸುತ್ತಿದೆ. ತಾಲೂಕು ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಿ, ಬರ ನಿರ್ವಹಣೆಗೆ ಮುಂದಾಗಲಾಗುವುದು. ನಮ್ಮ ರೈತರು ನೀರು ಸಂರಕ್ಷಣೆ, ಮಳೆ ಕೊಯ್ಲು, ಜಲ ಮರು ಸಂರಕ್ಷಣೆ, ವನ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಅವರು ಹೇಳಿದರು.
ಶಕ್ತಿ ಯೋಜನೆಯು ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಠಿ ನೀಡಿದ್ದು, ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರಿಂದ ಅನುಕೂಲವಾಗುತ್ತಿದೆ. ಗೃಹಜ್ಯೋತಿಯ ಮೂಲಕ ಪ್ರತಿಯೊಂದು ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈವರೆಗೆ 1.49 ಕೋಟಿ ಗ್ರಾಹಕರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಪ್ರಸುತಿತ 5 ಕೆ.ಜಿ ಅಕ್ಕಿಯ ಬದಲಿಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಶೀಘ್ರದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯ ಮೂಲಕ ಮಾಸಿಕ ರೂ. 2000 ಹಣವನ್ನು ಕುಟುಂಬದ ಯಜಮಾನಿಯರಿಗೆ ವರ್ಗಾಯಿಸಲು ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು, ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗಿದೆ. ಈಗಾಗಲೇ 1.08 ಕೋಟಿ ಕುಟುಂಬಗಳ ಯಜಮಾನಿಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ ನೀಡಲಾಗುವ 2000 ರೂ. ಮಾಸಿಕ ಸಹಾಯಧನ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ನೀಡಲು ಅನುಮೋದನೆ ನೀಡಲಾಗಿದೆ. ಪದವೀಧರರಿಗೆ 3,000 ರೂ. ಹಾಗೂ ಡಿಪ್ರೋಪಡೆದವರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲು ಉದ್ದೇಶಿಸಲಾಗಿರುವ ಯುವನಿಧಿ ಯೋಜನೆಯು 2022-23 ರ ಶೈಕ್ಷಣಿಕ ವರ್ಷ ಅಂತ್ಯಗೊಂಡ 6 ತಿಂಗಳ ನಂತರ ಜಾರಿಯಾಗಲಿದೆ.
ಶೋಷಿತ ವರ್ಗದ ಶ್ರೇಯೋಭಿವೃದ್ಧಿಗೆ ಪಿ.ಟಿ.ಸಿ.ಎಲ್ ಕಾಯಿದೆಗೆ ಮಾಡಲಾಗಿರುವ ತಿದ್ದುಪಡಿಯಿಂದಾಗಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇರುವುದಿಲ್ಲ. ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಕೃಷಿ ಭಾಗ್ಯ ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿ ವೇತನ ಸೇರಿದಂತೆ ಅನೇಕ ಯೋಜನೆಗಳನ್ನು ಮುಂದುವರೆಸಲಾಗಿದೆ.
ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಯ ಉದ್ಧೇಶದಿಂದ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗಿದೆ. ರಾಜ್ಯದಲ್ಲಿ 100 ಗ್ರಾಮ ನ್ಯಾಯಾಲಯಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.
30,000 ಕ್ಕಿಂತ ಕಡಿಮೆ ಜನಸಂಖ್ಯೆಯಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎನ್.ಜಿ.ಟಿ ಪರಿಸರ ಪರಿಹಾರ ನಿಧಿಯಡಿ ಒಟ್ಟು 110 ಮಲ ತ್ಯಾಜ್ಯ ಸಂಸ್ಕರಣಾ ಸ್ಥಾವರಗಳನ್ನು 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 28,387 ಅಂತ್ಯೋದಯ ಕಾರ್ಡ್ ಹಾಗೂ 1,68,833 ಆದ್ಯತಾ ಪಡಿತರ ಚೀಟಿಯಲ್ಲಿ , 6,77,004 ಫಲಾನುಭವಿಗಳಿಗೆ 05 ಕೆಜಿ ಅಕ್ಕಿ ಹಾಗೂ ಅಂತ್ಯೋದಯ ಕಾರ್ಡಿಗೆ 35 ಕೆಜಿ ಅಕ್ಕಿ ವಿತರಿಸಲಾಗುತಿತಿದೆ. ಇವುಗಳ ಜೊತೆಗೆ ಹೆಚ್ಚುವರಿಯಾಗಿ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ. ಯಂತೆ ಆಹಾರಧಾನ್ಯದ ಬದಲಾಗಿ ನೇರ ನಗದು ವರ್ಗಾವಣೆಯಡಿ ಫಲಾನುಭವಿಗಳಿಗೆ ಕಳೆದ ಮೂರು ತಿಂಗಳಿನಿಂದ ಈವರೆಗೆ 35.45 ಕೋಟಿ ರೂ. ಅನುದಾನವನ್ನು ಅವರ ಖಾತೆಗಳಿಗೆ ವರ್ಗಾಯಿಸಲಾಗಿದೆ.
ಜಿಲ್ಲೆಯಲ್ಲಿ 3,67,343 ವಿದ್ಯುತ್ ಗೃಹ ಬಳಕೆದಾರರಿದ್ದು, ಅವರುಗಳಲ್ಲಿ 306106 ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿಕೊಂಡು ಕಳೆದ ಆಗಸ್ಟ್ಸೆಪ್ಟಂಬರ್ ಮಾಹೆಯ ಒಟ್ಟು 34.82 ಕೋಟಿ ರೂ ಮೊತತಿ ರಿಯಾಯಿತಿ ನೀಡಲಾಗಿದ್ದು, ಇದನ್ನು ರಾಜ್ಯ ಸರ್ಕಾರವೇ ಭರಿಸಿದೆ.
ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ 2.13 ಲಕ್ಷ ಫಲಾನುಭವಿಗಳ ನೋಂದಣಿಯಾಗಿದ್ದು, 1.77 ಲಕ್ಷ ಫಲಾನುಭವಿಗಳ ಖಾತೆಗೆ 40.67 ಕೋಟಿ ರೂ. ಹಣ ಜಮಾ ಮಾಡಿ, ಶೇ. 88 ರಷ್ಟು ಸಾಧನೆ ಮಾಡಲಾಗಿದೆ.ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಕಳೆದ ಜೂನ್ ಮಾಹೆಯಿಂದ ಈವರೆಗೆ 43.20 ಲಕ್ಷ ಮಹಿಳಾ ಪ್ರಯಾಣಿಕರು ಸದುಪಯೋಗ ಪಡೆದುಕೊಂಡಿದ್ದು, ಇದಕ್ಕೆ ಸರ್ಕಾರ 15.84 ಲಕ್ಷ ರೂ. ಭರಿಸಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಐ.ಸಿ.ಡಿ.ಎಸ್ ಯೋಜನೆಯಡಿ ಒಟ್ಟು 62,246 ಫಲಾನುಭವಿಗಳ ಗುರಿಯಿದ್ದು, 55,200 ಫಲಾನುಭವಿಗಳಿಗೆ ಪೂರಕ ಪೌಷ್ಠಿಕ ಆಹಾರ ಒದಗಿಸಿ ಶೇ.89 ರಷ್ಟು ಸಾಧನೆ ಮಾಡಲಾಗಿದೆ. ಅಂತೆಯೇ ಮಾತೃಪೂರ್ಣ ಯೋಜನೆಯಡಿ ಒಟ್ಟು 11,763 ಫಲಾನುಭವಿಗಳ ಗುರಿಯಿದ್ದು, 11,282 ಫಲಾನುಭವಿಗಳಿಗೆ ಪೂರಕ ಪೌಷ್ಠಿಕ ಆಹಾರ ಒದಗಿಸಿ ಶೇ.86 ರಷ್ಟು ಸಾಧನೆ ಮಾಡಲಾಗಿರುತ್ತಿದೆ.
ಮಕ್ಕಳ ಸಮಗ್ರ ಅಭಿವೃದ್ಧಿ ಸೇವೆ ಯೋಜನೆಯ ಸೇವೆಗಳನ್ನು ಅತ್ಯುತ್ತಮವಾಗಿ ಅನುಷ್ಠಾನಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯಕದ್ರಿಗುಡ್ಡೆ ಅಂಗನವಾಡಿ ಕಾರ್ಯಕರ್ತೆ ಪುಷ್ಪಾರವರನ್ನು ಮಹಿಳಾ ಮತುತಿ ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಸಚಿವರು ಕಳೆದ ಅಕ್ಟೋಬರ್ 10 ರಂದು ದೆಹಲಿಯಲ್ಲಿ ಸನ್ಮಾನಿಸಿರುವುದು ಹೆಮ್ಮೆಯ ವಿಷಯ.
ಸಣ್ಣ ನೀರಾವರಿ ಮತುತಿ ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ 202324ನೇ ಸಾಲಿನಲ್ಲಿ ಸರ್ಕಾರದ ಪ್ರಮುಖ ಯೋಜನೆಯಾದ ಪಶ್ಚಿಮವಾಹಿನಿ ಯೋಜನೆಯಡಿ ಸುಮಾರು 450 ಕೋಟಿ ರೂ. ಅಂದಾಜು ಮೊತತಿದಲ್ಲಿ 56 ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದ ಸುಮಾರು 2476.70 ಹೆಕ್ಟೇರ್ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ.
ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಸಂರಕ್ಷಣೆಗಾಗಿ ಸುಮಾರು ರೂ. 26.46 ಕೋಟಿ ಮೊತತಿದಲ್ಲಿ 5.20 ಕಿ.ಮೀಟರ್ ಉದ್ದಕ್ಕೆ ನದಿದಂಡೆ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕೆರೆ ಆಧುನೀಕರಣ ಯೋಜನೆಯಡಿ ಸುಮಾರು ರೂ. 4.00 ಕೋಟಿ ಅಂದಾಜು ಮೊತ್ತದಲ್ಲಿ 2 ಕೆರೆಗಳನ್ನು ಅಭಿವೃದ್ಧಿಪಡಿಸಿ ಸುಮಾರು 12 ಹೆಕ್ಟೇರ್ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.
ಸಮುದ್ರದ ಹಿನ್ನೀರಿನಿಂದಾಗಿ ಕೃಷಿ ಭೂಮಿಗಳು ಲವಣಯುಕ್ತವಾಗುವುದನ್ನು ಸಂರಕ್ಷಿಸುವ ಸಲುವಾಗಿ ಸುಮಾರು 24 ಕೋಟಿ ರೂ ಮೊತತಿದ ಖಾರ್ಲ್ಯಾಂಡ್ ಯೋಜನೆಗಳನ್ನು ಕೈಗೊಳ್ಳಲಾಗುವುದು. ಹಾಗೂ ಸುಮಾರು ರೂ. 81.90 ಕೋಟಿ ಮೊತ್ತದ ಎರಡೂ ಏತ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಈ ಯೋಜನೆಯ ಅನುಷ್ಟಾನದಿಂದಾಗಿ ಸುಮಾರು 325 ಹೆಕ್ಟೇರ್ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿದೆ.
ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲು 525 ಕಾಮಗಾರಿಗಳನ್ನು 735.78 ಕೋಟಿ ರೂ. ಗಳಲ್ಲಿ ಕೈಗೊಳ್ಳಲಾಗಿದ್ದು, 2,47,190 ಮನೆಗಳ ನಳ ಸಂಪರ್ಕ ಗುರಿ ಹೊಂದಿ, ಪ್ರಸಕತಿ 1,92,065 ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲಾಗಿದೆ. ಬಾಕಿ ಉಳಿದ ಕಾಮಗಾರಿಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿವೆ.
ಜಿಲ್ಲೆಯ 122 ಗ್ರಾಮಗಳಿಗೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿ 1600 ಕೋಟಿ ರೂ ಮೊತ್ತದ ಕಾಮಗಾರಿಯನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ ಹಾಗೂ 59 ಗ್ರಾಮಗಳಿಗೆ 585 ಕೋಟಿ ರೂ ಮೊತ್ತದಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ.
ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ತ್ಯಾಜ್ಯ ಸಂಗ್ರಹಣಾ ವ್ಯವಸ್ಥೆ ಕಲ್ಪಿಸಲಾಗಿದ್ದು, 87 ಗ್ರಾಮ ಪಂಚಾಯತಿಗಳಲ್ಲಿ ಒಣ ತ್ಯಾಜ್ಯಗಳ ನಿರ್ವಹಣೆ ಮಾಡಲಾಗುತಿತಿದೆ.ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸಕ್ತ ಸಾಲಿನ 9 ಲಕ್ಷ ಮಾನವ ದಿನಗಳ ಸೃಜನೆಯ ಗುರಿ ಹೊಂದಿ, ಈವರೆಗೆ 5.34 ಲಕ್ಷ ಮಾನವ ದಿನಗಳನ್ನು ಸೃಜಿಸುವುದರೊಂದಿಗೆ ಶಾಶ್ವತ ಕಾಮಗಾರಿಗಳನ್ನು ಕೈಗೊಂಡು, ಕೂಲಿ ಉದ್ಯೋಗವನ್ನು ಒದಗಿಸಿ, 32.89 ಕೋಟಿ ಮೊತತಿವನ್ನು ವಿನಿಯೋಗಿಸಿದೆ.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆಗೆ 9,77,298 ಫ್ಲಾಟ್ಗಳಲ್ಲಿ 9,70,011 ಸಂಖ್ಯೆಯ ಫ್ಲಾಟ್ಗಳಲ್ಲಿ ಬೆಳೆ ಸಮೀಕ್ಷೆ ಕೈಗೊಂಡು ಶೇ. 99.25 ರಷ್ಟು ಪ್ರಗತಿ ಸಾಧಿಸಲಾಗಿದೆ. ಬೆಳೆ ಸಮೀಕ್ಷೆಯ ಮಾಹಿತಿಯನ್ನು ಬೆಳೆ ಹಾನಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ, ಪಹಣಿಯಲ್ಲಿ ಬೆಳೆ ದಾಖಲಾತಿ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಬಳಸಲಾಗುತ್ತಿದೆ.
ಮಲ್ಪೆ ಮೀನುಗಾರಿಕಾ ಬಂದರು ಏಷ್ಯದ ಅತಿ ದೊಡ್ಡ ಸರ್ವಋತು ಮೀನುಗಾರಿಕೆ ಬಂದರು, 2 ಲಕ್ಷಕ್ಕೂ ಹೆಚ್ಚು ಜನರು ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. 1950 ರ ಮೊದಲು ನಮ್ಮ ದೇಶದ ಒಟ್ಟು ಮೀನುಗಾರಿಕೆ ರಫುತಿ 5 ಕೋಟಿ ರೂ. ಗಳಾಗಿದ್ದರೆ ಪ್ರಸುತಿತ 57,586 ಕೋಟಿ ರೂಪಾಯಿಗಳನ್ನು ಮೀರಿದೆ. ಇದರಲ್ಲಿ ಜಿಲ್ಲೆಯ ಮೀನುಗಾರರ ಪಾತ್ರವೂ ಸಹ ಇದೆ. ಜಿಲ್ಲೆಯಲ್ಲಿ 2,516 ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 32.95 ಕೋಟಿ ರೂ. ಸಾಲ ಸೌಲಭ್ಯವನ್ನು ವಿತರಿಸಲಾಗಿದೆ. ಕಿರು ಆಹಾರ ಸಂಸ್ಕರಣ ಘಟಕ ಯೋಜನೆಯಡಿ 70.06 ಲಕ್ಷ ಸಾಲವನ್ನು ಸಹ ಮಂಜೂರು ಮಾಡಲಾಗಿದೆ.
ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಪ್ರತೀ ತಿಂಗಳು ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಎರಡು ತಿಂಗಳಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ 232 ಅಹವಾಲು ಸ್ವೀಕೃತವಾಗಿದ್ದು, 173 ವಿಲೇವಾರಿಯಾಗಿ 59 ಅಹವಾಲುಗಳು ತನಿಖಾ ಹಂತದಲ್ಲಿವೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಾದ ವಸತಿ, ಚರಂಡಿ ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ನಗರೋತ್ಥಾನ ನಾಲ್ಕನೇ ಹಂತದಲ್ಲಿ 80 ಕೋಟಿ ರೂ. ಅನುದಾನದಲ್ಲಿ 71 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ 32 ಕಾಮಗಾರಿಗಳು ಮುಕ್ತಾಯಗೊಂಡು ಬಾಕಿ ಉಳಿದ 39 ಕಾಮಗಾರಿಗಳು ಪ್ರಗತಿಯಲ್ಲಿವೆ.
ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಉತ್ಸವವು ಜನವರಿಯಲ್ಲಿ ಜರುಗಲಿದ್ದು, ಇಲ್ಲಿಗೆ ಆಗಮಿಸುವ ಭಕತಿರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅವು ತಮ್ಮ ಸಂದೇಶದಲ್ಲಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw