ಕನ್ನಡ ಬಾವುಟ ಹಿಡಿದು ಕುಣಿದು ಕುಪ್ಪಳಿಸಿದ ಟಿಬೆಟಿಯನ್ನರು - Mahanayaka
6:11 PM Thursday 12 - December 2024

ಕನ್ನಡ ಬಾವುಟ ಹಿಡಿದು ಕುಣಿದು ಕುಪ್ಪಳಿಸಿದ ಟಿಬೆಟಿಯನ್ನರು

chamarajanagara 1
01/11/2023

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು ಹನೂರು ತಾಲೂಕಿನ ಒಡೆಯರಪಾಳ್ಯ ಟಿಬೆಟಿಯನ್ ಕ್ಯಾಂಪ್‌ ನ ಜನರು ಕೂಡ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದಾರೆ.

ಸಾಂಪ್ರದಾಯಿಕ ಟಿಬೆಟಿಯನ್ ದಿರಿಸು ಧರಿಸಿ ಟಿಬೆಟಿಯನ್ನರು ಕನ್ನಡ ಬಾವುಟ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ.

ಜೊತೆಗೆ, ಜಿಗ್ಮೆ ಚೋಡಾನ್ ಎಂಬಾಕೆ ” ಅನಿಸುತಿದೆ ಯಾಕೋ ಇಂದು, ನೀನೇನೆ ನನ್ನವಳೆಂದು, ಎಂಬ ಹಾಡನ್ನು ಹಾಡಿ ಸಭಿಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ