ಮುಂದಿನ ಸಿಎಂ ಆಗ್ತಾರಾ ಡಾ.ಜಿ.ಪರಮೇಶ್ವರ್‌?: ಮಾಧ್ಯಮಗಳ ಪ್ರಶ್ನೆಗೆ ಪರಂ ಹೇಳಿದ್ದೇನು? - Mahanayaka
6:23 PM Thursday 12 - December 2024

ಮುಂದಿನ ಸಿಎಂ ಆಗ್ತಾರಾ ಡಾ.ಜಿ.ಪರಮೇಶ್ವರ್‌?: ಮಾಧ್ಯಮಗಳ ಪ್ರಶ್ನೆಗೆ ಪರಂ ಹೇಳಿದ್ದೇನು?

dr g parameshwer
03/11/2023

ಬೆಂಗಳೂರು: ಪೂರ್ಣಾವಧಿ 5 ವರ್ಷದವರೆಗೆ ಯಾರು ಮುಖ್ಯಮಂತ್ರಿಯಾಗಿರುತ್ತಾರೆಂಬ ವಿಚಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಸುರೇಶ್‌ ಅವರಿಗೆ ಮಾತ್ರ ತಿಳಿದಿರುವುದು. ಈ  ವಿಚಾರದಲ್ಲಿ ನಾವು ಹೇಳಿಕೆ ಕೊಡುವುದು ಸರಿ ಕಾಣಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸೂಚ್ಯವಾಗಿ ಹೇಳಿದ್ದಾರೆ.

ನಗರದಲ್ಲಿಂದು ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ದೆಹಲಿಯಲ್ಲಿ ಸರ್ಕಾರ ರಚನೆ ಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರುವುದು ಸಿಎಂ ಹಾಗೂ ಡಿಸಿಎಂಗೆ ಮಾತ್ರ. ಈ ಸಂದರ್ಭದಲ್ಲಿ ಪ್ರಧಾನಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತದೆ ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡುವುದಕ್ಕೆ ಆಗುವುದಿಲ್ಲ ಎಂದರು.

ಪರಮೇಶ್ವರ್ ಗೆ ಸಿಎಂ ಆಗುವ ಯೋಗ!

ಜಿ.ಪರಮೇಶ್ವರ್ ಗೆ ಸಿಎಂ ಆಗುವ ಅವಕಾಶವಿದೆ. ಪರಮೇಶ್ವರ್ ಈಗ ಹೋಮ್ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದ್ರೂ  ಆಗಬಹುದು ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ  ಚರ್ಚೆ ಆರಂಭಿಸಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಹಾಗೂ ಪೊಲೀಸ್ ಇಲಾಖೆಯ ಸಮುಚ್ಚಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಡಾಕ್ಟರೇ ನಿಮಗೆ ಅದೃಷ್ಟಯಿದೆ ನಡೆಸುತ್ತೀರಿ  ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕಂದ್ರೆ ಅವರಿಗೆ ಅದೃಷ್ಟ ಇದೆ ಅಂತಾ ನಾನು ಭಾವಿಸಿದ್ದೇನೆ. ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗ್ತಾರೆ ಅಂದ್ರೆ ನಾವೆಲ್ಲಾ ಸಂತೋಷ ಪಡುತ್ತೇವೆ,  ನಾವೆಲ್ಲಾ ಮುಖ್ಯಮಂತ್ರಿ ಆದ್ದಂತೆ ಭಾವಿಸುತ್ತೇನೆ ಎಂದು  ರಾಜಣ್ಣ ಹೇಳಿದ್ದಾರೆ.

ಸಿದ್ದರಾಮಯ್ಯ ಇರೊವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ.‌ ನಾವು, ಪರಮೇಶ್ವರ್ ಇಬ್ಬರು ಅವರ ಪರವಿರುತ್ತೇವೆ. ಸಿದ್ದರಾಮಯ್ಯ ಹೊರತು ಪಡಿಸಿದ್ರೆ, ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ ಎಂದಿದ್ದಾರೆ.

ರಾಜಣ್ಣ ಮಾತಿಗೆ ಪರಂ ಸಂತಸ

ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಕೆ.ಎನ್ ರಾಜಣ್ಣ  ಹೇಳಿರೋದಕ್ಕೆ ಪರಮೇಶ್ವರ್ ಸಂತಸ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಪೊಲೀಸ್ ಇಲಾಖೆ ವಸತಿಗೃಹಗಳ ಸಮಚಯ ಕಟ್ಟಡವನ್ನು ಉದ್ಘಾಟಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಪರಮೇಶ್ವರ್,  ನಾನು ಸಿಎಂ ಆಗಬೇಕು ಎಂದು ರಾಜಣ್ಣ ಹೇಳಿದ್ದಾರೆ.  ಅದಕ್ಕೆ ನಾನು  ಅಭಾರಿ ಆಗಿದ್ದೇನೆ  ಎಂದರು.

ಸಿಎಂ ಆಗುವ ಅದೃಷ್ಟ ಕೂಡಿ ಬರಲಿ ಅಂತ ನಾನು ಆಸೆಪಡ್ತಿನಿ. ಆ ಅದೃಷ್ಟ ಯಾವಾಗ ಕೂಡಿ ಬರುತ್ತೆ ಅಂತ ಹೇಳೋಕೆ ಆಗಲ್ಲ. ತುಮಕೂರಿನವರು ಅಲ್ವಾ ನೀವು, ನಮಗೆ ಒಳ್ಳೆದಾಗಬೇಕು ಅಂದ್ರೆ. ನನಗೆ ಸಪೊರ್ಟ್ ಮಾಡಿ ಎಂದು ಮಾಧ್ಯಮದವರಿಗೆ ಕೇಳಿ ಕೊಂಡರು.

ಇತ್ತೀಚಿನ ಸುದ್ದಿ