ಬಸ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್: ಸವಾರ ಸಾವು
03/11/2023
ಪಡುಬಿದ್ರೆ: ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಮಂಗಳೂರು ಕಡೆಗೆ ತೆರಳುವ ಖಾಸಗಿ ಬಸ್, ಪಡುಬಿದ್ರೆ ಪೇಟೆಯ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿತ್ತು. ಈ ವೇಳೆ ಹಿಂದಿನಿಂದ ಬಂದ ಬೈಕ್, ಬಸ್ ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದರು.
ಈ ಸಮಯ ಟ್ಯಾಂಕರ್ ಹರಿದ ಪರಿಣಾಮ ಪ್ರಜ್ವಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.