ಮೊಬೈಲ್ ಕಳ್ಳರ ಬಂಧನ: 3 ದ್ವಿಚಕ್ರ ವಾಹನ, ಲ್ಯಾಪ್ ಟಾಪ್, 9 ಮೊಬೈಲ್ ವಶಕ್ಕೆ
ಬೆಂಗಳೂರು: ಬೆಂಗಳೂರಿನ ಹಲಸೂರು ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ, ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ ಮಾಡಲಾಗಿದೆ. ಬಂಧಿತರಿಂದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಟ್ಟು 15,50,000/- ಮೌಲ್ಯದ ಒಂದು ಸ್ಮಾರ್ಟ್ ವಾಚ್ ವಶಪಡಿಸಿಕೊಂಡಿದ್ದಾರೆ.
ಕಳೆದ ಅ.17 ರಂದು ಹಲಸೂರು ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಹಲಸೂರು ಪೊಲೀಸರು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು, ವಿಚಾರಣೆ ಮಾಡಿದಾಗ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 15,50,000/- ಮೌಲ್ಯದ 3 ದ್ವಿಚಕ್ರ ವಾಹನ, ಲೆನೋವಾ ಲ್ಯಾಪ್ ಟಾಪ್, ವಿವಿಧ ಕಂಪನಿಯ 9 ಮೊಬೈಲ್ ಫೋನ್ ಗಳು ಹಾಗೂ ಒಂದು ಸ್ಕಾರ್ಟ್ ವಾಡ್ ನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ವಶಕ್ಕೆ ಪಡೆದ ವ್ಯಕ್ತಿಗಳನ್ನು, ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಹಲಸೂರು ಪೊಲೀಸ್ ಠಾಣೆಯು ಒಟ್ಟು ಮೂರು ಪ್ರಕರಣಗಳು, ಕೋರಮಂಗಲ ಪೊಲೀಸ್ ಠಾಣೆಯ ಒಂದು ಪ್ರಕರಣ ಮತ್ತು ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಒಂದು ಪ್ರಕರಣ ಪತ್ತೆಯಾಗಿರುತ್ತವೆ.
ದಸ್ತಗಿರಿ ಮಾಡಿದ ಇಬ್ಬರ ಪೈಕಿ ಒಬ್ಬ ವ್ಯಕ್ತಿ ಈ ಹಿಂದೆ ಉಪ್ಪಾರಪೇಟೆ ಪೊಲೀಸ್ ಠಾಣೆಯ ಕೊಲೆ ಪ್ರಕರಣ, ಮುಲಿಕೇಶಿನಗರ, ಭಾರತಿನಗರ, ಹೆಬ್ಬಾಳ, ಕೆ.ಆರ್.ಮರಂ, ಹೆಣ್ಣೂರು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ, ಬೈಕ್ ಕಳವು ಪ್ರಕರಣಗಳು ದಾಖಲಾಗಿರುತ್ತವೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಗಳಲ್ಲಿ ರಾಬರಿ ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿರುತ್ತವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw